ದೇಶ-ವಿದೇಶ
ದೆಹಲಿ-ಬೆಂಗಳೂರು ರೈಲಿಗೆ ಬಾಂಬ್ ಬೆದರಿಕೆ ಕರೆ: ಆರೋಪಿ ಸೆರೆ
ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್ ಕರೆ ಎಂಬುದನ್ನು ದೃಢಪಡಿಸಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ಆರೋಪಿ ಉತ್ತರ ಪ್ರದೇಶ ಮೂಲದ ದೀಪಕ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ದೆಹಲಿ-ಬೆಂಗಳೂರು
CA EXAMS 2025: ಮೇ 16 ರಿಂದ ಮೇ 24 ರವರೆಗೆ
ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಾರಣಕ್ಕೆ ಮುಂದೂಡಿಕೆಯಾಗಿದ್ದ CA ಪರೀಕ್ಷೆಗಳನ್ನು ಮೇ 16 ರಿಂದ ಮೇ 24 ರವರೆಗೆ ನಡೆಸಲಾಗುವುದು ಎಂದು ICAI ಹೇಳಿದೆ. ಈ ಪರೀಕ್ಷೆಗಳು ಮೇ 9 ರಿಂದ ಮೇ 14, 2025 ರ ನಡುವೆ ನಡೆಯಬೇಕಿತ್ತು, ಮುಂದೂಡಿಕೆಯಾಗಿದ್ದರಿಂದ ಹೊಸ ವೇಳಾಪಟ್ಟಿ
ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯ ಉದ್ಘಾಟನೆ
ಜಗತ್ತು ಬಲಿಷ್ಠರನ್ನು ಗೌರವಿಸುತ್ತದೆಯೇ ಹೊರತು ದುರ್ಬಲರನ್ನಲ್ಲ, ಜಗತ್ತಿನಲ್ಲಿ ಭಯಕ್ಕೆ ಸ್ಥಾನವಿಲ್ಲ, ಜಗತ್ತು ಶಕ್ತಿಯನ್ನು ಗೌರವಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇಳಿದ್ದರು ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದಾರೆ, ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು
ಪುಲ್ವಾಮಾ ದಾಳಿಗೆ ತಾನೇ ಹೊಣೆಯೆಂದ ಪಾಕ್
ಈವರೆಗೂ ಪುಲ್ವಾಮಾ ದಾಳಿಯನ್ನು ನಾವು ಮಾಡಿಲ್ಲ ಎಂದು ಹೇಳುತ್ತ ನಿರಾಕರಿಸುತ್ತಲೇ ಬಂದಿರುವ ಪಾಕಿಸ್ತಾನವು, ಭಾರತದ 40 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಒಪ್ಪಿಕೊಂಡಿ ರುವುದು ವರದಿಯಾಗಿದೆ. ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ಸೇನಾಧಿಕಾರಿಯೊಬ್ಬರು, ಪುಲ್ವಾಮಾ ಒಂದು
ಕದನ ವಿರಾಮ ಉಲ್ಲಂಘಿಸಿ ಪಾಕ್ ಡ್ರೋನ್ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ
ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ
ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ
ದಿಢೀರನೆ ಕದನ ವಿರಾಮ ಘೋಷಿಸಿದ ಭಾರತ- ಪಾಕಿಸ್ತಾನ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತತ್ ಕ್ಷಣವೇ ಕದನ ವಿರಾಮ ಘೋಷಿಸಿವೆ. ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದ್ದು, ಮೇ 12ರಂದು ಉಭಯ ದೇಶಗಳು ಮಾತುಕತೆಗೆ ಸಮ್ಮತಿ ಸೂಚಿಸಿವೆ. ವಿದೇಶಾಂಗ
ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧಾರ
ಮುಂದಿನ ದಿನಗಳಲ್ಲಿ ದೇಶದಲ್ಲಿನ ಉಗ್ರರ ಚಟುವಟಿಕೆಗಳನ್ನು ಯುದ್ಧವೆಂದು ಪರಿಗಣಿಸಿ ಸೂಕ್ತ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ
ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸಿದ ಪಾಕಿಸ್ತಾನ: ಭಾರತ ಹೈಅಲರ್ಟ್
ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ
ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ
ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ




