ದೇಶ-ವಿದೇಶ
ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಪ್ರಮಾಣದಲ್ಲಿ ಸಿದ್ಧಪಡಿಸಲು ಹಿಟ್ಟಿನ ಗಿರಣಿ ಯಂತ್ರ ಬಳಸುತ್ತಿದ್ದ ಎಂದು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪತ್ತೆ ಹಚ್ಚಿದೆ. ಹರಿಯಾಣದ ಫರಿದಾಬಾದ್‌ನ ಟ್ಯಾಕ್ಸಿ ಚಾಲಕನ
ಪಾಕ್ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಉತ್ತರಪ್ರದೇಶದ ಇಬ್ಬರ ಬಂಧನ
ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ
ಪಿಎಂಎಲ್‌ಎ: ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಚಾರ್ಜ್ಶೀಟ್
ಬ್ರಿಟನ್ ಮೂಲದ ರಕ್ಷಣಾ ವ್ಯಾಪಾರಿ ಸಂಜಯ್ ಭಂಡಾರಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಹೊಸ ಚಾರ್ಜ್ಶೀಟ್ ಸಲ್ಲಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ.
ಶಬರಿಮಲೆ: ನ. 24ರವರೆಗೆ ದಿನಕ್ಕೆ ಐದು ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಬಾರಿ ಭಕ್ತರ ಸಂಖ್ಯೆ ಅಂದಾಜು ಮೀರಿ ದಾಖಲೆ ಪ್ರಮಾಣದಲ್ಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನವೆಂಬರ್ 24ರವರೆಗೆ ದಿನಕ್ಕೆ 5,000 ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ ನೀಡಲಾಗಿದೆ. ನವೆಂಬರ್ 15ರಿಂದ ಆರಂಭವಾದ
ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕಾರ
10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್
ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರಪತಿ
ರಾತ್ರಿ ಪ್ರವಾಸೋದ್ಯಮ, ಸಫಾರಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ವನ್ಯಜೀವಿ ಸಂರಕ್ಷಣೆಗಾಗಿ ದೇಶಾದ್ಯಂತ ಅಭಯಾರಣ್ಯಗಳಲ್ಲಿ ರಾತ್ರಿ ಸಫಾರಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ನಿಷೇಧ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದಲ್ಲಿ ನ್ಯಾಯಮೂರ್ತಿಎ.ಜಿ. ಮಸಿಹ್ ಮತ್ತು ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ
ಮಗನಿಗೆ ಐಸಿಸ್ ಸೇರಲು ಬ್ರಿಟನ್‌ನಲ್ಲಿರುವ ಕೇರಳ ನರ್ಸ್ ಒತ್ತಾಯ: ದೂರು ದಾಖಲು
ಬ್ರಿಟನ್‌ನಲ್ಲಿ ನರ್ಸ್ ಆಗಿರುವ ಕೇರಳದ ಮಹಿಳೆ ತನ್ನ ಮಗನಿಗೆ ಸ್ನೇಹಿತನ ಜೊತೆ ಐಸಿಸ್‌ಗೆ ಸೇರಲು ಒತ್ತಾಯಿಸಿದ್ದ ಆರೋಪ ಕೇಳಿ ಬಂದಿದೆ. ಬಾಲಕ ಬ್ರಿಟನ್‌ನಿಂದ ಕೇರಳಕ್ಕೆ ಹಿಂದಿರುಗಿದ್ದು ಚಿಕ್ಕಪ್ಪನಿಗೆ ವಿಷಯ ತಿಳಿಸಿ, ತನ್ನ ತಾಯಿಯ ಸ್ನೇಹಿತ ಐಸಿಸ್ ಸಂಬಂಧಿತ ವೀಡಿಯೊಗಳನ್ನು ತೋರಿಸಿದ್ದಾನೆ ಮತ್ತು
ಸ್ಫೋಟಕ ತಯಾರಿ ವರದಿ: ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ
ದೆಹಲಿ ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳು ಸ್ಫೋಟಕ ತಯಾರಿಸುವ ಕುರಿತು ವರದಿ ಪ್ರಕಟಿಸಿದ್ದು, ಈ ಬೇಜವಾಬ್ದಾರಿತನದ ಕಾರ್ಯವೈಖರಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇಂಥ ಮಾಧ್ಯಮಗಳಿಗೆ
ಪ್ಯಾಲೆಸ್ತೀನಿಯರ ಲೆಬನಾನ್ ನಿರಾಶ್ರಿತರ ಶಿಬಿರಕ್ಕೆ ಇಸ್ರೇಲ್ ವೈಮಾನಿಕ ದಾಳಿ: 13 ಸಾವು
ದಕ್ಷಿಣ ಲೆಬನಾನ್ನ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಒಂದು ವರ್ಷದ ಹಿಂದೆ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮದ ನಂತರ ಲೆಬನಾನ್ ಮೇಲೆ ನಡೆದ ಅತ್ಯಂತ ಭೀಕರ




