ದೇಶ-ವಿದೇಶ
ರಾಜ್ಯ ಮಟ್ಟದ ಸಮೀಕ್ಷೆ ವಿಶ್ವಾಸಾರ್ಹವಲ್ಲ, ರಾಷ್ಟ್ರೀಯ ಗಣತಿಯಿಂದ ಪಾರದರ್ಶಕ ದತ್ತಾಂಶ
ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ
ಪಹಲ್ಗಾಮ್ ದಾಳಿಯ ಸಂಚುಕೋರ ಹಫೀಜ್ ಗೆ ಬಿಗಿ ಭದ್ರತೆ ಕಲ್ಪಿಸಿದ ಪಾಕ್ ಸರ್ಕಾರ
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆಯೋಜಿಸಿ 26 ಪ್ರವಾಸಿಗರ ಬಲಿಗೆ ಕಾರಣನಾಗಿರುವ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾದ ಲಷ್ಕರ್-ಎ-ತೈಬಾದ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಪಾಕಿಸ್ತಾನವು ಭದ್ರತೆಯನ್ನು ನಾಲ್ಕು ಪಟ್ಟು ಹೆಚ್ಚು ಮಾಡಿದೆ ಎಂದು ಮೂಲಗಳು ಹೇಳಿವೆ. ಪಾಕಿಸ್ತಾನ ಸಶಸ್ತ್ರ ಪಡೆಗಳ ಸಿಬ್ಬಂದಿಯ
ಪಾಕ್ ವಿಮಾನಗಳಿಗೆ ಭಾರತದ ವಾಯು ಪ್ರದೇಶದಲ್ಲಿ ನಿಷೇಧ
ಪಹಲ್ಗಾಂವ್ ನಲ್ಲಿ ಉಗ್ರರ ದಾಳಿಯ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಾಳಿಯ ಬಳಿಕ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು
ಲೋಕಪಾಲರ ಕಾರ್ಯವ್ಯಪ್ತಿ: ಜುಲೈನಲ್ಲಿ ಸುಪ್ರೀಂ ಪರಾಮರ್ಶೆ
ನವದೆಹಲಿ: ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ರಚನೆಯಾಗಿರುವ ಲೋಕಪಾಲದ ಕಾರ್ಯವ್ಯಾಪ್ತಿ ಕುರಿತು ಸಲ್ಲಿಕೆಯಾದ ದೂರುಗಳ ಕುರಿತು ಜುಲೈನಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ವಿಶೇಷ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾ. ಸೂರ್ಯ ಕಾಂತ್
ಹಸಿರು ಹೈಡ್ರೋಜನ್ ಪ್ರಮಾಣೀಕರಣ ಯೋಜನೆಗೆ ಸಚಿವ ಪ್ರಲ್ಹಾದ್ ಜೋಶಿ ಚಾಲನೆ
ನವದೆಹಲಿ: ದೇಶದಲ್ಲಿ 2030ರ ವೇಳೆಗೆ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ₹ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮತ್ತು 6 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಹೊಸ
36 ಗಂಟೆಯಲ್ಲಿ ಪಾಕಿಸ್ತಾನದ ಮೇಲೆ ಭಾರತ ಸೇನೆಯಿಂದ ದಾಳಿ: ಪಾಕಿಸ್ತಾನ ಸಚಿವ
ಇಸ್ಲಮಾಬಾದ್: ಭಾರತ ಸೇನೆ 24 ರಿಂದ 36 ಗಂಟೆಯೊಳಗಾಗಿ ಪಾಕಿಸ್ತಾನ ಗುರಿಯಾಗಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅತಾವುಲ್ಲಾ ಟರಾರ್ ತಿಳಿಸಿದ್ದಾರೆ. ಭಾರತದಲ್ಲಿನ ಬೆಳವಣಿಗೆಗಳ ಕುರಿತು ಅತ್ಯಂತ ಮಹತ್ವದ ಮಾಹಿತಿ ಸಂಗ್ರಹಿಸುವಲ್ಲಿ ಗುಪ್ತಚರ
ಜನಗಣತಿ ಜೊತೆಗೆ ಜಾತಿಗಣತಿ: ಕೇಂದ್ರ ಸರ್ಕಾರದ ಮಹತ್ವದ ಘೋಷಣೆ
ನವದೆಹಲಿ: ಮುಂದಿನ ಬಾರಿಯ ರಾಷ್ಟ್ರೀಯ ಜನಗಣತಿ ವೇಳೆ ಜಾತಿಗಣತಿ ಕೂಡ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು
ವಿಶಾಖಪಟ್ಟಣದಲ್ಲಿ ದೇಗುಲ ಗೋಡೆ ಕುಸಿದು 8 ಸಾವು
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇಗುಲದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಕುಸಿದು ಎಂಟು ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ
ಪಾಕ್ ವಿರುದ್ಧ ವಿಶ್ವ ಸಂಸ್ಥೆಯಲ್ಲಿ ಭಾರತ ಕಿಡಿಕಿಡಿ
ಪಹಲ್ಗಾಂನಲ್ಲಿ ಉಗ್ರರ ದಾಳಿಯ ಬಳಿಕ ಭಾರತ-ಪಾಕಿಸ್ತಾನದ ಸಂಬಂಧ ಹದಗೆಡುತ್ತಿದ್ದು, ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕಿಡಿ ಕಾರಿದೆ. ಪಾಕಿಸ್ತಾನವನ್ನು ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿರುವ ಧೂರ್ತ ದೇಶ ಎಂದು ಹೇಳಿದೆ. ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯ ‘ವಿಕ್ಟಿಮ್ಸ್ ಆಫ್ ಟೆರರಿಸಂ ಅಸೋಸಿಯೇಷನ್
ಜೆನೆರಿಕ್ ಮೆಡಿಸಿನ್ ಪೂರೈಕೆ ಬಂದ್ ಮಾಡಿದ ಭಾರತ: ಹೈರಾಣಾದ ಪಾಕ್ ವೈದ್ಯ ವಲಯ
ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಪಾಕ್ ವಿರುದ್ಧ ಪ್ರತೀಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದಾಗಿ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿರುವ ಮಧ್ಯೆಯೇ ಆ ದೇಶದಲ್ಲಿ ಅಗತ್ಯ ಔಷಧ ಬಿಕ್ಕಟ್ಟು ತೀವ್ರಗೊಂಡಿದೆ.




