ದೇಶ-ವಿದೇಶ
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 49 ರೂ. ಏರಿಕೆ
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೇಂದ್ರ ಬಜೆಟ್ ಮಂಡನೆಗೂ ಮೊದಲೇ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಬಳಕೆದಾರರಲ್ಲಿ ಮತ್ತು ಗ್ರಾಹಕರಲ್ಲಿ ಅಸಮಾಧಾನ ಹುಟ್ಟು ಹಾಕಿದೆ. ಈ ಬೆಲೆ ಏರಿಕೆಯ ಪರಿಣಾಮವನ್ನು ಬಳಕೆದಾರರು ಮತ್ತು ಗ್ರಾಹಕರು ಅನುಭವಿಸಬೇಕಾಗುತ್ತದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್‌ಗೆ ಶರಣು
ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾದ ಬಳಿಕ ಬಂಧಿಸಲಾಗಿದೆ.
ಇಂದು ಕೇಂದ್ರ ಬಜೆಟ್ ಮಂಡನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಮಂಡನೆಯಲ್ಲಿ 75 ವರ್ಷದ ಸಂಪ್ರದಾಯ ಮುರಿದು ಬಜೆಟ್ ಭಾಷಣದ ಎರಡನೇ ಭಾಗಕ್ಕೆ ಒತ್ತು ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಪ್ರಸ್ತುತಪಡಿಸುವ ರೀತಿ ಕೂಡ ಬೇರೆಯಾಗಿರಲಿದೆ ಎಂದು
ಬ್ಯಾಂಕ್ ಗೆ 40,000 ಕೋಟಿ ರೂ. ವಂಚನೆ: ರಿಲಾಯನ್ಸ್ ಕಮ್ಯೂನಿಕೇಷನ್ ಮಾಜಿ ಅಧ್ಯಕ್ಷ ಅರೆಸ್ಟ್
ಮುಂಬೈ: ಬ್ಯಾಂಕ್ ಗೆ 40 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ),
ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ
ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೆನಡಾದ ನೈಸರ್ಗಿಕ ಸಂಪನ್ಮೂಲಗಳ ಖಾತೆ ಸಚಿವ ಟಿಮ್ ಹಾಡ್ಗಸನ್ ನೇತೃತ್ವದ
ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ
ದೇಶದ ಜಿಡಿಪಿ ಶೇ 7.4, ಶೇ 6.8-7.2ರಷ್ಟು ಏರಿಕೆ ಸಾಧ್ಯತೆ: ಆರ್ಥಿಕ ಸಮೀಕ್ಷೆ ವರದಿ
ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ್ದು, ವರದಿ ಪ್ರಕಾರ ದೇಶದ ಜಿಡಿಪಿ 2025-26ರಲ್ಲಿ ಶೇ. 7.4, 2026-27ರಲ್ಲಿ ಶೇ. 6.8-7.2ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯ ಕೊಂದ ಯುವತಿ
ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್ ನೀಡಿ ತಂದೆ ತಾಯಿಯನ್ನು ನರ್ಸ್ ಯುವತಿ ಕೊಂದಿರುವ ಪ್ರಕರಣ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ. ಆರೋಪಿ ನಕ್ಕಲ ಸುರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್
ಕೊಲಂಬಿಯಾ ಗಡಿಯಲ್ಲಿ ವಿಮಾನ ಪತನ: ಸಂಸದ ಸೇರಿ 15 ಜನ ಸಾವು
ಕೊಲಂಬಿಯಾ-ವೆನೆಜುವೆಲಾ ಗಡಿ ಸಮೀಪ ವಿಮಾನ ಪತನಗೊಂಡು ಅದರಲ್ಲಿದ್ದ ಸಂಸದ, ಸಿಬ್ಬಂದಿ ಸೇರಿದಂತೆ 15 ಜನ ಪ್ರಾಣ ಕಳೆದುಕೊಂಡಿದ್ದಾರೆ ದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ವಿಮಾನ ಕುಕುಟಾದಿಂದ ಹೊರಟು ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ: ಕೇರಳ ಪೆಡ್ಲರ್ಸ್ ಸೇರಿ ಹತ್ತು ಮಂದಿ ಅರೆಸ್ಟ್
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲವೊಂದನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿದಂತೆ ಹತ್ತು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು




