ದೇಶ-ವಿದೇಶ
ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಮಾಜಿ ಕೇಂದ್ರ ಸಚಿವ ಪಶುಪತಿ!
ಪಾಟ್ನಾ: ರಾಷ್ಟ್ರೀಯ ಡೆಮಾಕ್ರೆಟಿಕ್ ಅಲಯನ್ಸ್ (ಎನ್ ಡಿಎ) ಮೈತ್ರಿಕೂಟದಿಂದ ಮಾಜಿ ಕೇಂದ್ರ ಸಚಿವ ಪಶುಪತಿ ಪಾರಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಪಾಟ್ನಾದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ ಮುಖ್ಯಸ್ಥ ಪಶುಪತಿ ಪಾರಸ್ 2014ರಿಂದ ನಾವು ಎನ್ ಡಿಎ ಮತ್ತು ಬಿಜೆಪಿ ಜೊತೆ ಇದ್ದೆವು. ಇನ್ನು ಮುಂದೆ ಎನ್ ಡಿಎ ಭಾಗವಾಗಿ ಇರುವುದಿಲ್ಲ ಎಂದು ಘೋಷಿಸಿದರು.
ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ
ವಿರುಧನಗರ: ದೇವಾಲಯ ಉತ್ಸವದ ವೇಳೆ ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಕರಿಸೇರಿ ಗ್ರಾಮದಲ್ಲಿ ಸೋಮವಾರ ಈ ದುರ್ಘಟನೆ ಸಂಭವಿಸಿದ್ದು, ದೇವಸ್ಥಾನದ ಉತ್ಸವದ ವೇಳೆ ಧ್ವನಿವರ್ಧಕ ಅಳವಡಿಸುತ್ತಿದ್ದಾಗ ತಿರುಪ್ಪತ್ತಿ
ಗುಜರಾತ್ ಕರಾವಳಿಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ವಶ!
ಅಹಮದಾಬಾದ್: ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಭಾರತೀಯ ಕೋಸ್ಟ್ ಗಾರ್ಡ್ (ICG) ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.
ಬೆಲ್ಜಿಯಂನಲ್ಲಿ ಮೆಹುಲ್ ಚೊಕ್ಸಿ ಅರೆಸ್ಟ್: ಭಾರತದಿಂದ ಗಡಿಪಾರಿಗೆ ಯತ್ನ
ನವದೆಹಲಿ: ಭಾರತದ ಬ್ಯಾಂಕ್ ಗಳಿಗೆ 12,636 ಕೋಟಿ ರೂ. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೊಕ್ಸಿ ಸ್ವಿರ್ಜರ್ಲೆಂಡ್ ಗೆ ಪರಾರಿಯಾಗುವ ಮುನ್ನ ಬೆಲ್ಜಿಯಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಭಾರತ ತೊರೆದು ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ ಮೆಹುಲ್ ಚೊಕ್ಸಿ ಭಾರತಕ್ಕೆ ವಾಪಸ್
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಮಂದಿ ಸಾವು 7 ಮಂದಿಗೆ ಗಾಯ
ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ. ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ
ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು
ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!
ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು
ಸೋನಿಯಾ ರಾಹುಲ್ ಗೆ ಇಡಿ ಸಂಕಷ್ಟ 661 ಕೋಟಿ ಮೌಲ್ಯದ ಆಸ್ತಿ ಸ್ವಾಧೀನಕ್ಕೆ ಇಡಿ ನೋಟೀಸ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ(ಇಡಿ)ದ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ
ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ: ಪರದಾಡಿದ ಗ್ರಾಹಕರು!
ನವದೆಹಲಿ: ಗೂಗಲ್‌ಪೇ, ಫೋನ್‌ಪೇ (Phonepe), ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಆಪ್ ಗಳಲ್ಲಿ ಸಮಸ್ಯೆ ಕಂಡು ಬಂದಿದ್ದರಿಂದ ಗ್ರಾಹಕರು ಹಣ ಪಾವತಿ ಮಾಡಲು ಆಗದೇ ಪರದಾಡಿದ್ದಾರೆ. ಶನಿವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ,
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಆಯ್ಕೆ
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.




