ದೇಶ-ವಿದೇಶ
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ: ಕೇರಳ ಪೆಡ್ಲರ್ಸ್ ಸೇರಿ ಹತ್ತು ಮಂದಿ ಅರೆಸ್ಟ್
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲವೊಂದನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿದಂತೆ ಹತ್ತು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ಡಾರ್ಕ್‌ವೆಬ್ ಮೂಲಕ ಮಾರಾ ಜಾಲ ನಿರ್ವಹಿಸುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು
ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರದಿದ್ದರೆ ವಿನಾಶಕಾರಿ ದಾಳಿ: ಇರಾನ್‌ಗೆ ಟ್ರಂಪ್ ಬೆದರಿಕೆ
ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ, ಒಪ್ಪಂದಕ್ಕೆ ಬರದಿದ್ದರೆ ಮುಂದಿನ ದಾಳಿ ತುಂಬಾ ಕೆಟ್ಟದಾಗಿ ಮತ್ತು ವಿನಾಶಕಾರಿಯಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಬೆದರಿಕೆಯೊಡ್ಡಿದ್ದಾರೆ. ಟ್ರೂತ್ ಸೋಷಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ
ವಾಟ್ಸಾಪ್‌ಗೂ ಇನ್ಮುಂದೆ ಸಬ್‌ಸ್ಕ್ರಿಪ್ಷನ್?
ವಾಟ್ಸಾಪ್ ಬಳಕೆದಾರರಿಗೆ ಇಷ್ಟು ದಿನ ಸಂಪೂರ್ಣವಾಗಿ ಉಚಿತವಾಗಿ ಸಿಗುತ್ತಿದ್ದ ಮೆಸೇಜಿಂಗ್ ಸೇವೆಗೆ ಇನ್ನು ಮುಂದೆ ಹಣ ಪಾವತಿಸಬೇಕಾದ ದಿನಗಳು ದೂರವಿಲ್ಲ. ಡೇಟಾ ರೀಚಾರ್ಜ್ ಜೊತೆಗೆ ಮಾಸಿಕ ಸಬ್‌ಸ್ಕ್ರಿಪ್ಷನ್ ಬಗ್ಗಯೂ ಯೋಚಿಸಬೇಕಾಗುತ್ತದೆ. ಮಾರ್ಕ್ ಜುಕರ್‌ಬರ್ಗ್ ನೇತೃತ್ವದ ಮೆಟಾ ವಾಟ್ಸಾಪ್ ಮೂಲಕ ಆದಾಯ ಗಳಿಸಲು
ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರ ಸಾವು
ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಇಂದು ಬೆಳಗ್ಗೆ ಪತನಗೊಂಡು ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ
ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ
ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ
ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್ ಆಫ್ ಆಲ್ ಡೀಲ್ಸ್
ಭಾರತ- ಐರೋಪ್ಯ ಒಕ್ಕೂಟ ಐತಿಹಾಸಿಕ ಒಪ್ಪಂದ
ನವದೆಹಲಿ: ಭಾರತ ಮತ್ತು ಐರೋಪ್ಯ ಒಕ್ಕೂಟ (EU) ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಒಪ್ಪಿಗೆ ನೀಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ‘ಎಲ್ಲಾ ಒಪ್ಪಂದಗಳ ತಾಯಿ’ ಎರಡೂ ಕಡೆಯವರಿಗೆ ಪ್ರಮುಖ ಅವಕಾಶಗಳನ್ನು ತರುತ್ತದೆ ಎಂಬ ಭರವಸೆ ನಮಗಿದೆ ಎಂದರು. ನಿನ್ನೆ
ನಾಳೆ ಇಯು- ಭಾರತ ಶೃಂಗಸಭೆ: ಇಯು ವಾಹನಗಳ ಮೇಲೆ ಶೇ.70ರಷ್ಟು ತೆರಿಗೆ ಕಡಿತ?
ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಗೆ ಮಂಗಳವಾರ ರಾಜಧಾನಿ ದೆಹಲಿಯಲ್ಲಿ ನಡೆಯಲಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸುಳಿವನ್ನು ಗಣರಾಜ್ಯೋತ್ಸವದಂದು ನೀಡಿವೆ. ದೆಹಲಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವದ ಪರೇಡ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಯುರೋಪಿಯನ್
ಮಾಜಿ ಪ್ರಿಯಕರನ ಪತ್ನಿಗೆ ಹೆಚ್‌ಐವಿ ಇಂಜೆಕ್ಷನ್ ಚುಚ್ಚಿ ಕೊಲೆಗೆ ಯತ್ನಿಸಿದ ಮಹಿಳೆ
ಆಂಧ್ರಪ್ರದೇಶದ ಕರ್ನೂಲ್ ಪಟ್ಟಣದಲ್ಲಿ ಮಹಿಳೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಪತ್ನಿಗೆ ಹೆಚ್‌ಐವಿ ಇಂಜೆಕ್ಷನ್ ಚುಚ್ಚಿರುವ ಘಟನೆ ನಡೆದಿದೆ. ಆರೋಪಿ ವಸುಂಧರಾ ಮತ್ತು ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಸುಂಧರಾ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ ಇಂಜೆಕ್ಷನ್ ನೀಡಿ ಕೊಲೆ
ಇರಾನ್ ಸಂಘರ್ಷ: ಯುದ್ಧ ಭೀತಿಯಿಂದ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡ ಖಮೇನಿ
ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿರುವ ಹಿನ್ನೆಲೆ ಅಲ್ಲಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್‌ನ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಟೆಹ್ರಾನ್‌ನಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.




