ದೇಶ-ವಿದೇಶ
ಸ್ನೇಹಿತರ ಜತೆಗೂಡಿ ಮಾಜಿ ಗೆಳತಿ ಮೇಲೆ ಗ್ಯಾಂಗ್ ರೇಪ್
ಸ್ನೇಹಿತರೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. ಈಗ ಗೆಳತಿ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ಮಾಜಿ ಪ್ರಿಯಕರ ಮೃಗೀಯವಾಗಿ ವರ್ತಿಸಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೂರಿಗಳು ಬೆಳಗ್ಗೆ ಶಾಲೆಯ ಬಳಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಯುವತಿಯನ್ನು ಮಾಜಿ ಗೆಳೆಯ ಅಪಹರಿಸಿದ ಬಳಿಕ ನಾಲ್ವರು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಮಹಿಳೆ ಮತ್ತು
ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟ ಸುನಿಲ್ ಶೆಟ್ಟಿ
ದಾವಣಗೆರೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ರೋಬೋಟಿಕ್ ಆನೆಯೊಂದನ್ನು ಕಳಿಸಿಕೊಟ್ಟಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿ ಸೇರಿದಂತೆ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ
ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,
2025 ರ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಭಾರತ, ಕೊಹ್ಲಿ ಅಮೋಘ ಶತಕ
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟ ಮುಂದುವರಿಸಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ನತ್ತ ಹೆಜ್ಜೆಯಿಟ್ಟಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ 242 ರನ್‌ಗಳ ಗುರಿಯನ್ನು
ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ
ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್
ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸ್ಥಗಿತ
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕ ವಿಸ್ತರಣೆಗೆ ಚಿಂತನೆ
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ
ಮಾಜಿ ಆರ್ ಬಿಐ ಗವರ್ನರ್ ಶಶಿಕಾಂತ್ ದಾಸ್ ಪ್ರಧಾನಿ ಪ್ರಿನ್ಸಿಪಾಲ್ ಸೆಕ್ರೆಟರಿ ಆಗಿ ನೇಮಕ
ರಿಸರ್ಬ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಶಶಿಕಾಂತ್ ದಾಸ್ ಅವರನ್ನು ಪ್ರಧಾನಿ ಅವರ ಪ್ರಿನ್ಸಿಪಾಲ್ ಸೆಕ್ರೆಟರಿ ಆಗಿ ನೇಮಕ ಮಾಡಲಾಗಿದೆ. ಕೇಂದ್ರ ಸಂಪುಟ ನೇಮಕಾತಿ ಸಮಿತಿ ಶನಿವಾರ ಈ ಆದೇಶ ಹೊರಡಿಸಿದ್ದು, ಪ್ರಧಾನಿ ಆರ್ಥಿಕ ಸಲಹೆಗಾರರಲ್ಲಿ ಒಬ್ಬರಾಗಿ ಕಾರ್ಯ ನಿರ್ವಹಿಸಲಿದ್ದಾರೆ
ಕೇರಳದಲ್ಲಿ ಜಿಎಸ್ ಟಿ ಅಧಿಕಾರಿ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸೋದರಿ ಹಾಗೂ ತಾಯಿಯ ಜೊತೆ ಜಿಎಸ್ ಟಿ ಹೆಚ್ಚುವರಿ ಕಮಿಷನರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕೇರಳದ ಕೊಚ್ಚಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ಮೂಲದ 44 ವರ್ಷದ ಮನೀಶ್ ವಿಜಯ್ ಸುಂಕ ಇಲಾಖೆಯಲ್ಲಿ ಹೆಚ್ಚುವರಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್,
ತೆಲಂಗಾಣದಲ್ಲಿ ಸುರಂಗ ಕುಸಿದು ಸಿಲುಕಿರುವ 30 ಕಾರ್ಮಿಕರು!
ಸುರಂಗ ಮಾರ್ಗ ಕುಸಿದು ಬಿದ್ದ ಪರಿಣಾಮ 30 ಕಾರ್ಮಿಕರು ಸಿಲುಕಿರುವ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಶ್ರೀಶೈಲ ಡ್ಯಾಮ್ ಬಳಿ ನೀರು ಸೋರಿಕೆ ಆಗುತ್ತಿದೆ ಎಂಬ ಕಾರಣಕ್ಕೆ ದುರಸ್ಥಿ ಕಾರ್ಯಕ್ಕೆ ಕಾರ್ಮಿಕರು ತೆರಳಿದ್ದಾಗ ಸುರಂಗದ ಒಂದು ಭಾಗ ಕುಸಿದಿದೆ