Menu

ಮಹಾಕುಂಭ ದಿನಾಂಕ ವಿಸ್ತರಣೆ ಇಲ್ಲ!

ಪ್ರಯಾಗ್ ರಾಜ್: ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದೇ ಸಮಾಪ್ತಿಯಾಗಲಿದೆ. ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ”ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ ಸಮಯಗಳು) ಆಧರಿಸಿ ನಿರ್ಧರಿಸಲಾಗುತ್ತದೆ ಹಾಗೂ ಅದರಲ್ಲಿ ಯಾವುದೇ ಬದಲಾಣೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಪ್ರಯಾಗರಾಜ್ನಲ್ಲಿ ನಡೆಯುವ ಮಹಾಕುಂಭ ಮೇಳದಲ್ಲಿ ಅನೇಕ ಸ್ಥಳಗಳಲ್ಲಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾಗಳಿವೆ.

ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮಲೀಲಾ ಮೈದಾನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ

ಚಾಂಪಿಯನ್ಸ್ ಟ್ರೋಫಿ: ಭಾರತ -ಬಾಂಗ್ಲಾದೇಶ ಮುಖಾಮುಖಿ ಇಂದು

ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಹುಮ್ಮಸ್ಸಿನಲ್ಲಿರುವ ಭಾರತವು ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 20ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ದುಬೈನ  ಇಂಟರ್‌ ನ್ಯಾಷನಲ್‌ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ಪ್ರಶಸ್ತಿಗಾಗಿ 12 ವರ್ಷಗಳ ಬರವನ್ನು ಕೊನೆಗೊಳಿಸುವ ಗುರಿಯನ್ನು

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್ 

ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ

ದೆಹಲಿ ಸಿಎಂ ಆಗಿ ರೇಖಾ ಗುಪ್ತಾ  ಇಂದು ಪ್ರಮಾಣ ವಚನ

ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ.  ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ

ಕುಂಭಮೇಳದ ನದಿ ನೀರು ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್

ನವದೆಹಲಿ:ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ. ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ ಆಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯನ್ನು ಸಾರಸಗಾಟಿ ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

ಕುಂಭಮೇಳದ ವ್ಯವಸ್ಥೆಯೇ ಸರಿಯಿಲ್ಲ: ಶಂಕರಾಚಾರ್ಯ ಜಗದ್ಗುರು ಅಸಮಾಧಾನ!

ಮಹಾಕುಂಭ ಮೇಳ ಅಲ್ಲ ಇದು ಮೃತ್ಯು ಕುಂಭ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ ಬೆನ್ನಲ್ಲೇ ಇದೀಗ ಉತ್ತರಾಖಂಡ್ ನ ಜ್ಯೋತಿ ಪೀಠದ ಜಗದ್ಗುರು ಎಂದೇ ಖ್ಯಾತರಾದ 46ನೇ ಶಂಕರಾಚಾರ್ಯ ಸ್ವಾಮೀಜಿ ಕುಂಭ ಮೇಳದ ವ್ಯವಸ್ಥೆ ಬಗ್ಗೆ

ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತ: ಅಮೆರಿಕ ತಿರುಗೇಟು

ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಅವರ ಬಳಿ ಸಾಕಷ್ಟು ಹಣವಿದೆ. ಅವರಿಗೆ ಯಾಕೆ ಹಣಕಾಸಿನ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,

ಸೌದಿಯಲ್ಲಿ ಗುಡುಗು ಸಹಿತ ಮಳೆ, ಪ್ರವಾಹದ ಎಚ್ಚರಿಕೆ

ಮರು ಭೂಮಿ ಸೌದಿ ಅರೇಬಿಯಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮೆಕ್ಕಾ, ರಿಯಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಪ್ರವಾಹದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಪ್ರಯಾಣಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರ್ಯಾಗಿಂಗ್ ಮಾಡಿದ್ದ ಕೇರಳದ 7 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು!

ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ