ದೇಶ-ವಿದೇಶ
ಪಾಕ್‌ನಿಂದ ಸ್ವತಂತ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ್
ಭಾರತ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ ಮರುದಿನವೇ ಪಾಕಿಸ್ತಾನದ ವಿರುದ್ಧ ಬಲೂಚಿಸ್ತಾನ್ ಬಂಡೆದ್ದು, ತಾನು ಸ್ವತಂತ್ರವೆಂದು ಘೋಷಿಸಿ ಕೊಂಡಿದೆ. ಬಲೂಚಿಸ್ತಾನ್ ಗುರುವಾರ ಬಾಂಬ್ ದಾಳಿ ನಡೆಸಿ ಪಾಕಿಸ್ತಾನದ 14 ಯೋಧರ ಬಲಿ ಪಡೆದಿತ್ತು. ಇಂದು ಬಲೂಚಿಸ್ತಾನ್ ನಾಯಕರು ಪಾಕಿಸ್ತಾನದಿಂದ ಬೇರೆ ಯಾಗಿ ಸ್ವತಂತ್ರವಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಬರಹಗಾರ ಮೀರ್ ಯಾರ್ ಬಲೂಚ್ ಅವರು, ಪಾಕಿಸ್ತಾನದಿಂದ ಬಲೂಚಿಸ್ತಾನ ಸ್ವತಂತ್ರಗೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಬಲೂಚಿಸ್ತಾನಕ್ಕೆ ವಿಶ್ವಸಂಸ್ಥೆ ಮಾನ್ಯತೆ
ಪೋಪ್ ಪಟ್ಟಕ್ಕೆ ಅಮೆರಿಕದ ರಾಬರ್ಟ್ ಪ್ರೆವೋಸ್ಟ್ ಆಯ್ಕೆ
ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೆರವಾಗಿದ್ದ ಕ್ರೈಸ್ತರ ಧರ್ಮೀಯರ ಪರಮೋಚ್ಚ ಗುರುಪಟ್ಟಕ್ಕೆ ಅಮೆರಿಕದ ರಾಬರ್ಟ್ ಪ್ರೆವೋಸ್ಟ್ ಆಯ್ಕೆಯಾಗಿದ್ದಾರೆ. ಪೋಪ್ ಪಟ್ಟಕ್ಕೆ ಆಯ್ಕೆಯಾದ ಮೊದಲ ಅಮೆರಿಕನ್ ಇವರು. ಇವರ ಪೋಪ್ ಪಟ್ಟದ ಹೆಸರು 14ನೇ ಪೋಪ್ ಲಿಯೋ, ಇವರು 267ನೇ ಪೋಪ್ ಆಗಿದ್ದಾರೆ.
ಭಾರತ-ಪಾಕ್: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್ ದಯಾನಂದ್
ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ
ಜಮ್ಮುವಿನಿಂದ ಹತ್ತು ಸಾವಿರ ನಿವಾಸಿಗಳ ಸ್ಥಳಾಂತರ, ನಾಗರಿಕರನ್ನು ಗುರಿಯಾಗಿಸಿ ಪಾಕ್ ಶೆಲ್ ದಾಳಿ
ಭಾರತೀಯ ಸೇನಾ ದಾಳಿಗೆ ಪ್ರತಿಯಾಗಿ ಪಾಕಿಸ್ತಾನವು ಜಮ್ಮುವಿನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ನಡೆಸುತ್ತಿದೆ. ಪಾಕಿಸ್ತಾನಕ್ಕೆ ಭಾರತದ ಸೈನ್ಯದ ಜೊತೆ ಹೋರಾಡುವ ಶಕ್ತಿ ಇಲ್ಲ, ಅದಕ್ಕೆ ನಾಗರಿಕರ ಮೇಲೆ ದಾಳಿ ಮಾಡುತ್ತಿದೆ, ಇಂದು ಬೆಳಗ್ಗೆ ಹಲವು ಬಾರಿ ಸ್ಫೋಟದ ಸದ್ದು ಕೇಳಿದೆ
ಭಾರತ-ಪಾಕ್ ಹೆಚ್ಚಿದ ಉದ್ವಿಗ್ನತೆ: ದೇಶದ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ
ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತವು ತನ್ನ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ವರದಿಗಳು ತಿಳಿಸಿವೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ಸೂಚಿಸಿವೆ. ದೇಶಾದ್ಯಂತ
ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದೊಂದಿಗೆ ರಾಜ್ಯ ಒಪ್ಪಂದ
ನ್ಯೂಸ್ಪೇಸ್ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ ದೊಂದಿಗೆ (IN-SPACe) ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐಎಎಸ್ ಮತ್ತು ಐಎನ್-ಸ್ಪೇಸ್
ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ಇಂದು ತಿರಂಗಾ ಯಾತ್ರೆ
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಇಂದು 09-05-2025 ರಂದು ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್
ಮೋದಿ ಭೇಟಿಯಾದ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ
ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ, ವಿಶ್ವ ಬ್ಯಾಂಕ್ ಸಮೂಹದ ಅಧ್ಯಕ್ಷ ಅಜಯ್ ಬಂಗಾ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಭಾರತ
ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ
ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ
ಆಪರೇಷನ್ ಸಿಂಧೂರ್ ನಿಲ್ಲಲ್ಲ: ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಗತ್ಯಬಿದ್ದರೆ ಯಾವುದೇ ಸಮಯದಲ್ಲಿ ಮುಂದುವರಿಸಲಾಗುವುದು. ಇದಕ್ಕಾಗಿ ಸೇನೆ ಸನ್ನದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ ಸದ್ಯಕ್ಕೆ ಇಲ್ಲಿಗೆ ನಿಲ್ಲಿಸಲಾಗಿದೆ.




