ದೇಶ-ವಿದೇಶ
ಗಂಡನಿಂದ ಮೋಸ: ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ
ಮದುವೆ ಆದ ಮೇಲೆ ಕೆಲಸ ಕೊಡಿಸುವುದಾಗಿ ನಂಬಿಸಿ ಮದುವೆ ಆಗಿದ್ದ ಪತಿ ಮಾಡಿದ ವಂಚನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 29 ವರ್ಷದ ಕಬಡ್ಡಿ ಕಿರಣ್ ಸೂರಜ್ ದಾಧೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಮದುವೆ ಆದ ಮೇಲೆ ಆಕೆಗೆ ಹಾಗೂ ಸೋದರನಿಗೆ ಉದ್ಯೋಗ ಕೊಡಿಸುತ್ತೇನೆ. ಈ ಮೂಲಕ ಆರ್ಥಿಕ ಸಂಕಷ್ಟದಿಂದ ಹೊರಗೆ ಬರಬಹುದು ಎಂದು ನಂಬಿಸಿ 2020ರಲ್ಲಿ
ಅಮೆರಿಕದಲ್ಲಿ ಭಾರತದ ಅಕ್ಕಿ: ಟ್ರಂಪ್ ಕಿಡಿಕಿಡಿ, ಹೆಚ್ಚಿನ ಸುಂಕದ ಬೆದರಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ದೇಶಕ್ಕೆ ಬರುತ್ತಿರುವ ಭಾರತದ ಅಕ್ಕಿ ಮೇಲೆ ಕಣ್ಣಿಟ್ಟಿದ್ದಾರೆ. ಅಮೆರಿಕದಲ್ಲಿ ಭಾರತದ ಅಕ್ಕಿ ಡಂಪ್ ಮಾಡುವುದು ಸರಿಯಲ್ಲ, ಈಗಾಗಲೇ ಅಕ್ಕಿಯ ಮೇಲೆ ಶೇ. 53 ಸುಂಕ ಇದೆ. ಇನ್ನೂ ಅಧಿಕ ಸುಂಕ ಹೇರಲು ಮುಂದಾಗಿದ್ದಾರೆ. ಭಾರತದ
ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದ್ದು ದಂಪತಿ ಉಚ್ಚಾಟನೆ
ನವದೆಹಲಿ: ಮುಖ್ಯಮಂತ್ರಿ ಆಗಲು 500 ಕೋಟಿ ರೂ. ನೀಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ನವಜ್ಯೋತ್ ಸಿಂಗ್ ಸಿದು ದಂಪತಿಯನ್ನು ಪಕ್ಷದಿಂದ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಛಾಟಿಸಲಾಗಿದೆ. ಕೆಲವು ದಿನಗಳ ಹಿಂದೆ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ
ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ
ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ.
ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್
“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ
ವಂದೇ ಮಾತರಂ ಸರಿಯಾಗಿ ಅರ್ಥ ಮಾಡಿಕೊಳ್ಳಿ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ವಂದೇ ಮಾತರಂ ಗೀತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗೆ ಲೋಕಸಭೆ ಅಧಿವೇಶನದಲ್ಲಿ ಸೋಮವಾರ ಅವಕಾಶ
ಜಿನ್ನಾ ಕಾರಣಕ್ಕೆ ವಂದೇ ಮಾತರಂ ಗೀತೆಗೆ ನೆಹರು ಕತ್ತರಿ: ಪ್ರಧಾನಿ ಮೋದಿ ಕಿಡಿ
ನವದೆಹಲಿ: ಮುಸ್ಲಿಮ್ ಲೀಗ್ ನಾಯಕ ಮೊಹಮದ್ ಅಲಿ ಜಿನ್ನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ವಂದೇ ಮಾತರಂ ಹಾಡನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ
ನ್ಯಾಷನಲ್ ಹೆರಾಲ್ಡ್ ಕೇಸ್: ಡಿಸಿಎಂ ಆಪ್ತ ಇನಾಯತ್ ಅಲಿಗೆ ದೆಹಲಿ ಪೊಲೀಸ್ ನೋಟಿಸ್
ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ
ಕೋಲಾರದಲ್ಲಿ ಏಳು ದಿನದ ಹೆಣ್ಣು ಮಗುವನ್ನು ಬಿಟ್ಟು ಅಸ್ಸಾಂ ದಂಪತಿ ಸುಸೈಡ್
ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿ ಗ್ರಾಮದಲ್ಲಿ ಅಸ್ಸಾಂ ಮೂಲದ ದಂಪತಿ ಏಳು ದಿನಗಳ ಹೆಣ್ಣು ಶಿಶುವನ್ನು ಬಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಹಮಾನ್ (28) ಮತ್ತು ಪತ್ನಿ ಫರಿಜಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ದಂಪತಿ ಅಸ್ಸಾಂನವರಾಗಿದ್ದು,




