ದೇಶ-ವಿದೇಶ
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: 8 ವಿದ್ಯಾರ್ಥಿಗಳ ಸಾವು
ತಿರುವನಂತಪುರದಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಸೇಲಂನ ವಿಶ್ವ (20), ದಿಂಡಿಗಲ್‌ನ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈನ ಸಂತೋಷ್ (20) ಮತ್ತು ಪ್ರಸನ್ನ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿಎಸ್ಎಂ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ
ಮಾನಸಿಕ ಅಸ್ವಸ್ಥೆ ಮೇಲೆ ದೌರ್ಜನ್ಯ ಯತ್ನ: ಕಚ್ಚಿ ಬಾಲಕನ ಓಡಿಸಿದ ಬೀದಿ ನಾಯಿ
ತಮಿಳುನಾಡಿನ ಕೊಯಂಬತ್ತೂರಿನ ರಸ್ತೆಬದಿಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಬಾಲಕನನ್ನು ಬೀದಿನಾಯಿ ಕಚ್ಚಿ ಓಡಿಸಿದ ಘಟನೆ ನಡೆದಿದೆ. ರಸ್ತೆಬದಿಯಲ್ಲಿದ್ದ ಅಸಹಾಯಕ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಬಾಲಕ ದೌರ್ಜನ್ಯ ಎಸಗಲು ಮುಂದಾದಾಗ ಬೀದಿ ನಾಯಿ ಆತನ
ಏರ್‌ಟೆಲ್ ಗ್ರಾಹಕರಿಗೆ ಡ್ಯುಯೊಲಿಂಗೊ ವರ್ಷದ ಚಂದಾದಾರಿಕೆ ಉಚಿತ
ಮೊಬೈಲ್ ಕಲಿಕಾ ವೇದಿಕೆಯಾದ ಡ್ಯುಯೊಲಿಂಗೊ, ಭಾರತದ ಪ್ರಮುಖ ಟೆಲಿಕಾಂ ಸೇವಾ ಸಂಸ್ಥೆ ಭಾರ್ತಿ ಏರ್‌ಟೆಲ್ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅನ್ವಯ ಏರ್‌ಟೆಲ್‌ನ ಬರೋಬ್ಬರಿ 37.6 ಕೋಟಿ ಚಂದಾದಾರರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಪೂರ್ಣ 12 ತಿಂಗಳು ಸೂಪರ್
ನೇಪಾಳ ಪ್ರವಾಹ: 9 ದಿನದ ಬಳಿಕ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಲ್ಲಿ ಇಬ್ಬರ ರಕ್ಷಣೆ
ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳದಲ್ಲಿ 9 ದಿನದ ಬಳಿಕ ತ್ರಿಶೂಲಿ 3A ಜಲ ವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಕಾರ್ಮಿಕರನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ. ಈ ಬೆಳವಣಿಗೆ ಸುರಂಗದೊಳಗೆ ಇನ್ನೂ ಕೆಲವರು ಜೀವಂತ ಇರುವ ಸಾಧ್ಯತೆ ಬಗ್ಗೆ ರಕ್ಷಣಾ ಸಿಬ್ಬಂದಿಯಲ್ಲಿ
ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ನಿತಿನ್ ಗಡ್ಕರಿ ರಾಜ್ಯಗಳಿಗೆ ಮನವಿ
ಖಾಸಗಿ ದ್ವಿಚಕ್ರ ವಾಹನ ಮಾಲೀಕರು ಬೈಕ್ ಟ್ಯಾಕ್ಸಿ ಸೇವೆ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಖಾಸಗಿ ದ್ವಿಚಕ್ರ ವಾಹನಗಳ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಾರಿಗೆ
ಶುದ್ಧೀಕರಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಹಲ್ದ್ವಾನಿಯ ರಾಮ ಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ತಾನು ಭಾಷಣ ಮಾಡಿದ ಬಳಿಕ ಆ ಜಾಗವನ್ನು ಶುದ್ಧೀಕರಣ ಮಾಡಿರುವ ಪ್ರಕ್ರಿಯೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಸ್ಪೀಕರ್ ಜೆಪಿ ನಡ್ಡಾ ಅವರನ್ನು ಆಗ್ರಹಿಸಿದ್ದಾರೆ.
ಕಾನೂನು ವಿದ್ಯಾರ್ಥಿಗಳ ವಿರುದ್ಧ ಬಿಸಿಐ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ
ಕಾನೂನು ಅಧ್ಯಯನ ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಯಾವುದೇ ಶಾಸನಬದ್ಧ ಅಧಿಕಾರವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಆಯಾ ಶಿಕ್ಷಣ ಸಂಸ್ಥೆಗಳು ಅವುಗಳದೇ ಆದ ನಿಯಮಾವಳಿಗಳ ಅನ್ವಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದು
ತಿರುಪತಿ ತಿರುಮಲ ದೇಗುಲ ಅಧಿಕಾರಿ ಮನೆ, ಕಚೇರಿಗಳಿಗೆ ಎಸಿಬಿ ದಾಳಿ
ಆಂಧ್ರಪ್ರದೇಶ ಭ್ರಷ್ಟಾಚಾರ ನಿಗ್ರಹ ದಳವು ತಿರುಪತಿ ವೆಂಕಟೇಶ್ವರ ದೇಗುವಲ ನಿರ್ವಹಿಸುವ ತಿರುಪತಿ ತಿರುಮಲ ದೇವಸ್ಥಾನದ ಉಪ ಕಾರ್ಯ ನಿರ್ವಾಹಕ ಅಧಿಕಾರಿ ಮೆಂಡು ಲೋಕನಾಥಂ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ಉಪ ಕಾರ್ಯ ನಿರ್ವಾಹಕ ಅಧಿಕಾರಿ ಆದಾಯಕ್ಕಿಂತ
ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಶಿವಕುಮಾರ್
ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂತಹ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಅವರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆ ಕೇಳಲ್ಲ ಎಂದು ಸಿಎಂ ಡಿಕೆ
ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ರಾಹುಲ್ ಗಾಂಧಿಯವರು ಯಾವ ತಪ್ಪು ಮಾಡದಿದ್ದರೂ ಅವರ ಮೇಲೆ ಕೇಸು ದಾಖಲು ಮಾಡಲಾಗಿದೆ. ಇದು ಘನ ಘೋರ ಅನ್ಯಾಯ. ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಲಾಗಿದೆ. ಇದನ್ನು ಪ್ರಶ್ನೆ ಮಾಡಿದ್ದೇ ಅಪರಾಧ ಎಂಬಂತೆ ರಾಹುಲ್




