Menu

ʻಆಪರೇಷನ್‌ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ

ʻಆಪರೇಷನ್‌ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದ್ದು, ವಿಮಾನ ಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ

ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಯ್ತು “ಸಿಂಧೂರ್”, ಅರ್ಥಕ್ಕಾಗಿ ಸರ್ಚ್‌

ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿರುವ ಭಾರತ ವಾಯುಪಡೆ ನಡೆಸಿರುವ ಭಯೋತ್ಪಾದಕರ ತಾಣಗಳ ಮೇಲಿನ ದಾಳಿ ” ಆಪರೇಷನ್‌ ಸಿಂಧೂರ್‌” ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಗಿದೆ. ಅಲ್ಲಿನ ಜನತೆ ಸಿಂಧೂರ್ ಪದದ ಅರ್ಥವೇನು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಗೂಗಲ್‌ನಲ್ಲಿ ವಾಯುದಾಳಿ, ಭಾರತೀಯ ಸೇನೆ, ಭಾರತ

ಪಹಲ್ಗಾಮ್ ದಾಳಿಗೆ “ಆಪರೇಷನ್‌ ಸಿಂಧೂರ” ಸೂಕ್ತ ಪ್ರತ್ಯುತ್ತರವೆಂದ ಡಿ.ಕೆ ಶಿವಕುಮಾರ್‌

ಹೇಡಿತನದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ “ಆಪರೇಷನ್‌ ಸಿಂಧೂರ” ಸೂಕ್ತ ಪ್ರತ್ಯುತ್ತರ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ, ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಡಿಸಿಎಂ ಭಯೋತ್ಪಾದಕತೆಯನ್ನು ಬಗ್ಗುಬಡಿಯಲು ಸನ್ನದ್ಧವಾಗಿರುವ

ಆಪರೇಷನ್‌ ಸಿಂಧೂರ: ಚೀನಾ ನಿರ್ಮಿತ ಪಾಕ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿತೇ ಭಾರತ

ಪಹಲ್ಗಾಂ ಉಗ್ರರ ದಾಳಿಗೆ ಪ್ರತಿಯಾಗಿ ಭಾರತವು ಉಗ್ರರ ನೆಲೆಗಳ ಮೇಲೆ ವಾಯುಪಡೆ ಮೂಲಕ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ವೇಳೆ ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು  ಹೊಡೆದು ಹಾಕಿದೆ. ಜೆಎಫ್‌-17 ಯುದ್ಧ ವಿಮಾನ ಭಾರತದ ದಾಳಿಯನ್ನು ತಡೆಯಲು ಬಂದಾಗ

ಭಾರತದಿಂದ ‘ಆಪರೇಷನ್ ಸಿಂಧೂರ್ʼ: ಉಗ್ರರ ನೆಲೆಗಳ ಮೇಲೆ ವಾಯು ದಾಳಿ

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ‘ಆಪರೇಷನ್ ಸಿಂಧೂರ್ʼ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನದ ಉಗ್ರರು ಭಾರತದ ಹಿಂದೂ ಮಹಿಳೆಯ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು, ಶಾಸಕ ಸ್ಥಾನಕ್ಕೆ ಕಂಟಕ

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ  ತೀರ್ಪು ನೀಡಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರು ಗಂಗಾವತಿ ಶಾಸಕ ಸ್ಥಾನವನ್ನು  ಕಳೆದುಕೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಓಬಳಾಪುರಂನಲ್ಲಿ ನಡೆದ ಗಣಿಗಾರಿಕೆ ಪ್ರಕರಣಕ್ಕೆ

ಸೂಚನೆ ನೀಡದೆ ನೀರು ಬಿಟ್ಟ ಭಾರತ: ಪಾಕಿಸ್ತಾನದಲ್ಲಿ ಫ್ಲಡ್‌ ಅಲರ್ಟ್‌

ಒಂದು ದಿನ ಪೂರ್ತಿ (ಸೋಮವಾರ) ಪಾಕಿಸ್ತಾನಕ್ಕೆ ನೀರು ಬಂದ್‌ ಮಾಡಿದ್ದ ಭಾರತ ಮಂಗಳವಾರ ಯಾವುದೇ ಸೂಚನೆ ನೀಡದೆ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್‌ ನದಿ ನೀರಿನ ಮಟ್ಟ ಏರಿದ್ದು, ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ  ನೀಡಲಾಗಿದೆ. 24 ಗಂಟೆನೀರನ್ನು

ದೇಶಾದ್ಯಂತ 259 ಕಡೆ ಅಣಕು ಪ್ರದರ್ಶನಕ್ಕೆ ಕೇಂದ್ರ ಸಿದ್ಧತೆ

ರಾಜಧಾನಿ ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು ಸೇರಿದಂತೆ 259 ಕಡೆಗಳಲ್ಲಿ ಯುದ್ಧ ಜಾಗೃತಿಯ ಅಣಕು ಪ್ರದರ್ಶನ ನಡೆಯಲಿದೆ. 1971ರ ಭಾರತ- ಪಾಕಿಸ್ತಾನ ಯುದ್ಧ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಅಣಕು ಪ್ರದರ್ಶನ ನಡೆಯಲಿದೆ. ಪೆಹಲ್ಗಾಮ್ ದಾಳಿ ವೇಳೆ ಉಗ್ರರಿಂದ 26

ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ನಾಗರಿಕರುಪ್ರಾಣ ಕಳೆದುಕೊಂಡ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲಿತ ಉಗ್ರರು ಈ ದಾಳಿ ನಡೆಸಿರುವುದಾಗಿ ಗುಪ್ತಚರ ಇಲಾಖೆ ದೃಢಪಡಿಸಿದೆ. ಇದೀಗ ಅಮೆರಿಕವು ಭಯೋತ್ಪಾದನೆ ವಿರುದ್ಧ

ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್‌ ಮಾಕ್‌ ಡ್ರಿಲ್‌

ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್