Menu

ವಿಶ್ವದಲ್ಲಿಯೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲೊಂದು ಅಪರೂಪದ ಘಟನೆ ನಡೆದಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ ಮಾಡಲಾಗಿದೆ. ಇದು ಪಶು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಕರಡಿ ಕಾಲು ಜೋಡಣೆಯ ಮೈಲಿಗಲ್ಲು ಎಂದರೆ ತಪ್ಪಾಗದು. ಕಾಲು ಕಳೆದುಕೊಂಡಿದ್ದ ವಸಿಕರನ್ ಎಂಬ ಕರಡಿಗೆ ತಜ್ಞರು ಮೂರು ದಿನ ಕಾಲು ಜೋಡಣೆಯ ಕಾರ್ಯ ನಡೆಸಿ ಚಿಕಿತ್ಸೆ ಮಾಡಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಮತ್ತು ವೈಲ್ಡ್ ಲೈಫ್ sos ಸಂಸ್ಥೆ ಕರ್ನಾಟಕ ಅರಣ್ಯ

ಉತ್ತರಾಖಂಡದಲ್ಲಿ ಭೀಕರ ಮಳೆ, ಪ್ರವಾಹ: ಹಲವರು ನಾಪತ್ತೆ, ಭೂಕುಸಿತ, ಕೊಚ್ಚಿ ಹೋದ ರಸ್ತೆಗಳು

ಉತ್ತರಾಖಂಡದ ಹಲವೆಡೆ ಮೇಘಸ್ಫೋಟದ ಪರಿಣಾಮ ಏಕಾಏಕಿ​ ಪ್ರವಾಹ ಉಂಟಾಗಿದ್ದು, ಭೂಕುಸಿತಗಳು ಸಂಭವಿಸಿವೆ. ಭಾರಿ ಮಳೆ ಮತ್ತು ಪ್ರವಾಹಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದ, ಮನೆಗಳು ಕುಸಿದಿವೆ. ಅನೇಕರು ನಾಪತ್ತೆಯಾಗಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಿಮಾಲಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಈ ವರ್ಷ 17 ಮಂದಿ ಬಲಿ

ಕೇರಳದಲ್ಲಿ ಮಾರಕವಾದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್‌ನ ಹೊಸ ಪ್ರಕರಣ ವರದಿಯಾಗಿದ್ದು, ತಿರುವನಂತಪುರಂನಲ್ಲಿ 17 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಈ ವರ್ಷ ಇಲ್ಲಿಯವರೆಗೆ ಈ ಸೋಂಕಿನಿಂದ 17 ಜನರು ಮೃತಪಟ್ಟಿದ್ದಾರೆ. ಒಟ್ಟು 67 ಜನರು ಮೆದುಳು ತಿನ್ನುವ ಅಮೀಬಾದಿಂದ

ನೇಪಾಳದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಶಪಥ ಮಾಡಿದ ಸುಶೀಲಾ ಕರ್ಕಿ

ನೇಪಾಳವನ್ನು ಪೀಡಿಸಿರುವ ಮಹಾಭ್ರಷ್ಟಾಚಾರವನ್ನು ನೂತನ ಪ್ರಧಾನಿ ಕರ್ಕಿ ಅವರು ಬಹುಶೀಘ್ರವಾಗಿ ನಿರ್ಮೂಲನೆ ಮಾಡುವುದಾಗಿ ಶಪಥ ತೊಟ್ಟಿದ್ದಾರೆ.  ಅವರ  ಪ್ರಜಾ ನ್ಯಾಯ ಕಾಪಾಡುವ ಮತ್ತು ದೇಶದ ಕ್ಷೇಮವನ್ನು ಕಾಪಾಡುವ ಶಪಥ ಈಡೇರಲಿ ಎಂಬುದೇ ಭಾರತದ ಆಶಯ.  ಭಾರತದ ನೆರೆಯ ದೇಶದಲ್ಲೀಗ ಪ್ರಜಾತಂತ್ರದ ಮರುಸ್ಥಾಪನೆ.

ನೇಪಾಳದಲ್ಲಿ ಸುಶೀಲಾ ಕರ್ಕಿ ಮೇಲೂ Gen-Z ಕೆಂಗಣ್ಣು

ನೇಪಾಳದಲ್ಲಿ Gen-Z ಆಕ್ರೋಶ, ಹಿಂಸಾಚಾರ, ಕೆಪಿ ಒಲಿ ಶರ್ಮಾ ಪದಚ್ಯುತಿ ಬಳಿಕ ಪ್ರತಿಭಟನೆ ಕೊನೆಗೊಂಡ ನಂತರ ಸುಶೀಲಾ ಕರ್ಕಿ ಅವರನ್ನು ಚುನಾಯಿತ ನಾಯಕಿಯಾಗಿ ಆಯ್ಕೆ ಮಾಡಿದ್ದಲ್ಲದೆ, ಭಾನುವಾರ ಅವರು ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ಕೂಡ ವಹಿಸಿಕೊಂಡರು. ಆದರೆ ಸುಶೀಲಾ ಕರ್ಕಿ ಅಧಿಕಾರ

ಲಿವ್‌ ಇನ್‌ ಟುಗೆದರ್‌: ಮದುವೆ ನಿರಾಕರಣೆ ಗಂಭೀರ ಅಪರಾಧವಲ್ಲವೆಂದ  ಅಲಹಾಬಾದ್‌ ಹೈಕೋರ್ಟ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದರೆ ಅದು ಗಂಭೀರ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ್ದರೂ ಮದುವೆಯ ಭರವಸೆಯನ್ನು ಮುರಿದರೆ ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಲ್ಲ ಎಂದು ಕೋರ್ಟ್‌

ಅಭಿಮಾನಿಗಳ ನಿರೀಕ್ಷೆಯಂತೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್‌ಗೆ ಸೋಲುಣಿಸಿ ಬೀಗಿದ ಭಾರತ

ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿ ಬಹಳಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಂತೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದೊಂದಿಗೆ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ

“ಮತ ಕಳ್ಳತನ” ರಾಹುಲ್‌ ವಿರುದ್ಧ ಕಿರುಚುವ ಬದಲು ತನಿಖೆಗೆ ಆದೇಶಿಸಬೇಕಿತ್ತು: ಮಾಜಿ ಸಿಇಸಿ ಖುರೇಶಿ

ಮತ ಕಳ್ಳತನ ಆರೋಪಗಳ ಕುರಿತು ಚುನಾವಣಾ ಆಯೋಗವು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ಯಾಗಿ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ ಹೇಳಿದ್ದಾರೆ. ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ

ಲಂಡನ್‌ನಲ್ಲಿ ಭುಗಿಲೆದ್ದ ವಲಸೆ ವಿರೋಧಿ ಪ್ರತಿಭಟನೆ, 20ಕ್ಕೂ ಹೆಚ್ಚು ಪೊಲೀಸರಿಗೆ ಗಂಭೀರ ಗಾಯ

ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ ಪ್ರತಿಭಟನೆ ಲಂಡನ್‌ನಲ್ಲಿ ಆರಂಭಗೊಂಡಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ 20ಕ್ಕೂ ಹೆಚ್ಚು ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ನಡೆದ ಬೃಹತ್‌ ʻವಲಸೆ ವಿರೋಧಿʼ ಮೆರವಣಿಗೆಯಲ್ಲಿ ಲಕ್ಷಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗವಹಿಸಿದ್ದರು. ಪ್ರತಿಭಟನಾ

ಶಾಂತಿಯ ಜೊತೆ ಅಭಿವೃದ್ಧಿಯತ್ತ ಹೆಜ್ಜೆ ಹಾಕೋಣ: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣ

ಇಂಫಾಲ (ಮಣಿಪುರ): 2023ರಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಇಂಫಾಲಕ್ಕೆ ಬಂದಿಳಿದ ಅವರನ್ನು, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್ ಸ್ವಾಗತಿಸಿದರು.