Monday, September 28, 2026
Menu

ತಮಿಳುನಾಡಲ್ಲಿ ಕರ್ನಾಟಕದ ಗ್ಯಾರಂಟಿ ಮಾದರಿ ಜಾರಿ: ಡಿಕೆ ಶಿವಕುಮಾರ್‌

“ತಮಿಳುನಾಡಿನಲ್ಲಿ ಮಹಿಳೆಯರಿಗೆ ಪ್ರಸ್ತುತ 1 ಸಾವಿರ ಹಣ ನೀಡುತ್ತಿದ್ದು, ಈ ಚುನಾವಣೆ ಬಳಿಕ ಕರ್ನಾಟಕ ಮಾದರಿಯಂತೆ 2 ಸಾವಿರ ನೀಡಲಾಗುವುದು” ಎಂದು ಡಿಸಿಎಂ ಡಿಕೆ  ಶಿವಕುಮಾರ್ ಹೇಳಿದರು. ತಮಿಳುನಾಡಿನ ಉತ್ತಂಗರೈ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಪ್ಪುಸ್ವಾಮಿ ಅವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್  ಚುನಾವಣೆ ಪ್ರಚಾರ ಭಾಷಣ ಮಾಡಿದರು. “1.31 ಕೋಟಿ ಕುಟುಂಬದ ಮಹಿಳೆಯರಿಗೆ ಇದರಿಂದ ಪ್ರಯೋಜನವಾಗಲಿದೆ. ವಿದ್ಯುತ್ ಮೀಟರ್ ಇಲ್ಲದೆ ರೈತರ ಪಂಪ್ ಸೆಟ್ ಗಳಿಗೆ ಉಚಿತ

ಜಪಾನ್‌ನಲ್ಲಿ ಪ್ರಬಲ ಭೂಕಂಪ, ಸುನಾಮಿ ಸಾಧ್ಯತೆ, ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ

ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆತಂಕ ಉಂಟಾಗಿದ್ದು, ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಅಧಿಕಾರಿಗಳು ಒತ್ತಾಯಿಸಿದ್ದಾರೆ. ಮೂರು ಮೀಟರ್ ವರೆಗಿನ ಅಲೆಗಳು ಏಳುವ ಸಾಧ್ಯತೆ ಇದೆ, ಅಲೆಗಳು

ಇರಾನ್‌ ಹಡಗು ವಶಕ್ಕೆ ಪಡೆದ ಅಮೆರಿಕ, ತಕ್ಕ ಪ್ರತಿಕ್ರಿಯೆ ನೀಡುತ್ತೇನೆಂದ ಟೆಹ್ರಾನ್‌

ಓಮನ್ ಸಮುದ್ರದ ಬಳಿ ಅಮೆರಿಕ ಸೇನೆಯು ಇರಾನ್‌ನ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿದೆ. ಈ ಬೆಳವಣಿಗೆ ಶಾಂತಿ ಒಪ್ಪಂದ ಸಾಧ್ಯತೆಯನ್ನು ಕುಗ್ಗಿಸಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್

ಉಧಂಪುರದಲ್ಲಿ ಬಸ್‌ ಉರುಳಿ 15 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ

ಹರ್ಮುಜ್‌ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್‌ ದಾಳಿ: ನಾಲ್ವರು ಭಾರತೀಯರ ಸಾವು

ಹರ್ಮುಜ್‌ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಒಬ್ಬ ನಾವಿಕ ನಾಪತ್ತೆಯಾಗಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಭಾರತದ

ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ: ಹರ್ಮುಜ್‌ ಜಲಸಂಧಿ ಮೇಲೆ ಮತ್ತೆ ಇರಾನ್‌ ನಿರ್ಬಂಧ

ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣ ಹರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಹೇಳಿದೆ. ಇರಾನ್ ನಿರ್ಣಾಯಕ ಜಲಮಾರ್ಗವಾಗಿರುವ ಹರ್ಮುಜ್ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದ್ದು, ತೆರೆಯುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು

ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆ ಮರಳಿ ತನ್ನಿ: ಪ್ರಿಯಾಂಕಾ ಗಾಂಧಿ

ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆಯನ್ನು ಮರಳಿ ತರುವಂತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು. ಎಲ್ಲಾ ಪಕ್ಷಗಳಿಂದ ಅಂಗೀಕರಿಸಲ್ಪಟ್ಟ ಹಳೆಯ ಮಹಿಳಾ ಮಸೂದೆಯನ್ನು ಸೋಮವಾರವೇ ಕೇಂದ್ರ ಸರ್ಕಾರ ಮಂಡಿಸಬೇಕು. ಸಂಸತ್

ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರಗಳನ್ನು ಕಡಿಮೆ ಮಾಡುವ ಷಡ್ಯಂತ್ರವನ್ನು ವಿರೋಧಿಸುತ್ತೇವೆ: ಡಿಕೆ ಶಿವಕುಮಾರ್‌

“ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡನೆ ಮಾಡಿತ್ತು. ಮಹಿಳಾ ಮೀಸಲಾತಿಗೆ ನಾವೆಲ್ಲರೂ ಬೆಂಬಲ ನೀಡುತ್ತೇವೆ. ಆದರೆ ಕ್ಷೇತ್ರ ಪುನರ್ ವಿಂಗಡಣೆ ಹೆಸರಿನಲ್ಲಿ ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರಗಳನ್ನು ಕಡಿಮೆ ಮಾಡುವ ಷಡ್ಯಂತ್ರವನ್ನು ನಾವು ವಿರೋಧಿಸುತ್ತೇವೆ.

ಇಸ್ರೇಲ್- ಲೆಬನಾನ್ ಕದನ ವಿರಾಮ, ಯುರೇನಿಯಂ ಹಸ್ತಾಂತರಕ್ಕೆ ಇರಾನ್‌ ಸಮ್ಮತಿ: ಟ್ರಂಪ್‌

ಇರಾನ್‌ ತನ್ನಲ್ಲಿರುವ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ, ಯುದ್ಧ ಕೊನೆಗೊಳ್ಳುವ ಸಮಯ ಹತ್ತಿರದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.  ವೈಟ್‌ಹೌಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ಇರಾನ್‌ ನಮಗೆ ಯುರೇನಿಯಂ ಹಿಂತಿರುಗಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ.

ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು

ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ