ದೇಶ-ವಿದೇಶ
ಪಹಲ್ಗಾಮ್ ದಾಳಿ: ಸ್ಫೋಟದಿಂದ ಉಗ್ರನ ಮನೆ ನಾಶ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರ ಮನೆಗಳು ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ ಸಕ್ರಿಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆ ಹಾನಿಗೊಂಡಿದೆ. ಈತ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಸ್ಥಳೀಯ ಕಮಾಂಡರ್ ಎಂದು ಹೇಳಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಭದ್ರತಾ ಪಡೆಗಳು ಆ
ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ
ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ
ಭಾರತೀಯ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ, ವಾಘಾ ಗಡಿ ಬಂದ್ ಮಾಡಿದ ಪಾಕಿಸ್ತಾನ
ನವದೆಹಲಿ:ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್ ವೀಸಾ ರದ್ದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಗುರುವಾರ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ಪ್ರಧಾನಿ
ಪಾಕಿಸ್ತಾನಿಯರ ವೀಸಾ ರದ್ದು, ಏ.27ರೊಳಗೆ ಭಾರತ ತೊರೆಯುವಂತೆ ಸೂಚನೆ
ನವದೆಹಲಿ: ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಏಪ್ರಿಲ್ 27ರೊಳಗೆ ಭಾರತವನ್ನು ತೊರೆಯುವಂತೆ ಸೂಚಿಸಿದೆ. ಗುರುವಾರ ನಡೆದ ಭದ್ರತಾ ಸಂಪುಟ ಸಮಿತಿಯ (CCS) ನಿರ್ಣಯದ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ
ಕಲ್ಪನೆಗೂ ಮೀರಿದ ಶಿಕ್ಷೆ ಕೊಡುವ ಸಮಯ ಬಂದಿದೆ: ಪ್ರಧಾನಿ ಮೋದಿ ಗುಡುಗು
ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ
ಭಾರತದಿಂದ ಪ್ರತೀಕಾರದ ಭೀತಿ: ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ತನ್ನ ಮೇಲೆ ದಾಳಿ ನಡೆಸಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ತನ್ನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ. ವಿಶೇಷ ಆರ್ಥಿಕ ವಲಯದೊಳಗಿನ ಕರಾಚಿ ಕರಾವಳಿಯಲ್ಲಿ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಂಡಿರುವುದಾಗಿ ರಕ್ಷಣಾ
ಪಹಲ್ಗಾಂ ದಾಳಿ ಬಳಿಕ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಭಾರತ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರ ಇದಾಗಿದೆ. ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು
ದುಬಾರಿಯಾದ ವಾಚ್, ಕನ್ನಡಕ, ಶೂ: ಏಪ್ರಿಲ್ 3ರಿಂದಲೇ ಶೇ.1ರಷ್ಟು ಜಿಎಸ್ ಟಿ ಜಾರಿ
ಮುಂಬೈ: ಐಷಾರಾಮಿ ಕೈಗಡಿಯಾರಗಳು, ಕೈಚೀಲಗಳು, ಪ್ರಾಚ್ಯ ವಸ್ತುಗಳು, ವರ್ಣಚಿತ್ರಗಳು, ಶಿಲ್ಪಗಳು, ಸನ್‌ಗ್ಲಾಸ್‌ಗಳು, ಹೋಮ್ ಥಿಯೇಟರ್ ಸಿಸ್ಟಮ್‌ಗಳು, ಬೂಟುಗಳು ಮತ್ತು ಕ್ರೀಡಾ ಉಡುಪುಗಳು ದುಬಾರಿ ಆಗಿವೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಸೋಮವಾರವೇ ಅಧಿಸೂಚನೆ ಹೊರಡಿಸಿದ್ದು, ಶೇ.1ರಷ್ಟು ಜಿಎಸ್ ಟಿ ಜಾರಿ ಮಾಡಲಾಗಿದೆ.
ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ
ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್ ಕ್ರೀಂ
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ




