Wednesday, November 05, 2025
Menu

ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ

ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್‌ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ

ಚಿನ್ನ ಪಡೆದು ಶುದ್ಧತೆ ಪರಿಶೀಲಿಸಿ ಹಣ ನೀಡುವ ಗೋಲ್ಡ್‌ ಎಟಿಎಂ

ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರ ಮಾಡುತ್ತಲೇ ಇರುವ ಚೀನಾ ಶಾಂಘೈನಲ್ಲಿ ಚಿನ್ನದ ಎಟಿಎಂ ಪರಿಚಯಿಸಿದೆ. ಬಳಕೆದಾರರಿಗೆ ತಮ್ಮ ಆಭರಣಗಳನ್ನು ಮಾರಾಟ ಮಾಡಲು ಮತ್ತು ತಕ್ಷಣ ಹಣ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಶಾಂಘೈನ ಗೋಲ್ಡ್ ಎಟಿಎಂಗಳನ್ನು ಶೆನ್ಜೆನ್ ಮೂಲದ ಕಿಂಗ್‌ಹುಡ್ ಗ್ರೂಪ್ ತಯಾರಿಸಿದೆ.

ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ

ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ

ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ

ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್‌ ಪಾಕ್‌ ಸೇನೆಯ ಆಪ್ತ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌

ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಂಬೈ, ದಿಲ್ಲಿಗಳಲ್ಲಿ ಪೊಲೀಸ್‌ ಅಲರ್ಟ್‌

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ

ಜಮ್ಮು ಕಾಶ್ಮೀರದಲ್ಲಿ ಇಬ್ಬರು ವಿದೇಶಿಯರು ಸೇರಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರು!

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಕ್ರೌರ್ಯ ಮೆರೆದಿರುವ ಉಗ್ರರು ಇಬ್ಬರು ವಿದೇಶಿಯರು ಸೇರಿದಂತೆ 26 ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಬಾಯಿಸರಣ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಏಕಾಏಕಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಹಲವು ಕಡೆ ಗುಂಡಿನ ದಾಳಿ

ಮೋದಿಗೆ ಹೋಗಿ ಹೇಳು ಎಂದ ಉಗ್ರ: ಘಟನೆ ವಿವರಿಸಿದ ಪತ್ನಿ ಪಲ್ಲವಿ

ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರನ್ನು ಹತ್ಯೆಗೈದ ಉಗ್ರರು ಇದನ್ನು ಮೋದಿಗೆ ಹೋಗಿ ಹೇಳು ಎಂದು ಹೇಳಿದ್ದಾರೆ ಎಂದು ಪತ್ನಿ ಪಲ್ಲವಿಗೆ ಹೇಳಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದಾಗ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್

ಹೈಕೋರ್ಟ್‌ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ

ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು