Menu

ಸ್ಲೀಪರ್‌ ಬಸ್‌ನಲ್ಲಿ ಹೊತ್ತಿಕೊಂಡ ಬೆಂಕಿ: ಮಲಗಿದ್ದಲ್ಲೇ ಐವರು ಸಜೀವ ದಹನ

ಲಕ್ನೋದ ಮೋಹನ್ ಲಾಲ್ ಗಂಜ್ ಪ್ರದೇಶದ ಕಿಸಾನ್ ಪಥದಲ್ಲಿ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡಿದ್ದಾರೆ. ಬಸ್‌ನಲ್ಲಿ 60 ಪ್ರಯಾಣಿಕರಿದ್ದರು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣಕ್ಕೆ ಪ್ರಯಾಣಿಕರಿಗೆ ಗಮನಕ್ಕೆ ಬಂದಿಲ್ಲ. ಇದ್ದಕ್ಕಿದ್ದಂತೆ ಹೊಗೆ ತುಂಬಿಕೊಂಡು ಉಸಿರುಗಟ್ಟಿದಾಗ ಕೆಲವು ಪ್ರಯಾಣಿಕರು ನೋಡಿದರೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ. ಆತಂಕಗೊಂಡ ಪ್ರಯಾಣಿಕರು ಕಿಟಕಿ ಗಾಜು

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿಗೆ ನಿಂದನೆ: ಬಿಜೆಪಿ ಸಚಿವನ ವಿರುದ್ಧ ಎಫ್ ಐಆರ್ ದಾಖಲು!

ಭೂಪಲ್: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ

ಆಪರೇಷನ್ ಸಿಂಧೂರ್‌ನಲ್ಲಿ ಮೃತ ಉಗ್ರರಿಗೆ ಪಾಕ್‌ ಸರ್ಕಾರದಿಂದ ತಲಾ ಕೋಟಿ ರೂ. ಪರಿಹಾರ

ಭಾರತದ ಆಪರೇಷನ್ ಸಿಂಧೂರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸುವ ಮೂಲಕ ಆ ರಾಷ್ಟ್ರವು ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ವ್ಯಕ್ತಪಡಿಸಿದಂತಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ, ಉಗ್ರ ಮಸೂದ್

ಮೇ 27ಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ; ಮುಂಗಾರು ಮಾರುತ ವಾಡಿಕೆಗಿಂತ ಮುಂಚಿತವಾಗಿಯೇ ಮೇ 27ರಂದು ಕೇರಳ ಪ್ರವೇಶಿಸಲಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಂಗಳವಾರ ಮುಂಗಾರು ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು

ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್‌ ಖರ್ಗೆ

ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ

ಭಾರತಕ್ಕೆ ಬಿಎಸ್ ಎಫ್ ಯೋಧ ಹಸ್ತಾಂತರಿಸಿದ ಪಾಕಿಸ್ತಾನ!

ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿದ್ದ ಭಾರತದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆ. ಆರ್ಟರಿ ಗಡಿಯಲ್ಲಿ ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು

ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್‌

ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕಾರ

ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹೊಸ ಮುಖ್ಯ ನ್ಯಾಯಾಧೀಶ ರಾಗಿರುವ ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಮೊದಲ ಬೌದ್ಧ, ಎರಡನೆಯ ದಲಿತ ಸಿಜೆಐ ಎನಿಸಿದ್ದಾರೆ. ಬಿ.ಆರ್ ಗವಾಯಿ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ

ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್‌ ನಾಗರಿಕರು?

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ

ಪಾಕ್‌ ರಾಜತಾಂತ್ರಿಕನ ಹೊರ ದಬ್ಬಿದ ಭಾರತ

ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬ್ಬ ಅಧಿಕಾರಿಯನ್ನು ‘ಪರ್ಸನಾ ನಾನ್ ಗ್ರಾಟಾ’ (ಅಪೇಕ್ಷಿತವಲ್ಲದ ವ್ಯಕ್ತಿ) ಎಂದು ಘೋಷಿಸಿ ಕೇಂದ್ರ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಅಧಿಕಾರಿಯು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿ 24 ಗಂಟೆಗಳ ಒಳಗೆ ದೇಶವನ್ನು