ದೇಶ-ವಿದೇಶ
ನ್ಯಾ. ರಾಮಕೃಷ್ಣ ಗವಾಯಿ ಮುಂದಿನ ಸಿಜೆಐಗೆ ಶಿಫಾರಸು
ನವದೆಹಲಿ: ಕೇಂದ್ರ ಸರಕಾರ ಒಪ್ಪಿದರೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ತಮ್ಮ ನಿವೃತ್ತಿ ನಂತರ ಖಾಲಿ ಬೀಳಲಿರುವ ಸಿಜೆಐ ಸ್ಥಾನಕ್ಕೆ ಹಾಕಿ ಸಿಜೆ ನ್ಯಾ. ಸಂಜೀವ್ ಖನ್ನಾ ಅವರು ನ್ಯಾ. ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರಯಾಗಿರುವ ನ್ಯಾಯಮೂರ್ತಿ ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ
ಉರ್ದು ಭಾರತದ ಭಾಷೆ, ಯಾವುದೇ ಧರ್ಮಕ್ಕೆ ಸೇರಿದ್ದಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಉರ್ದು ಭಾಷೆಯು ಭಾರತದಲ್ಲಿ ಜನ್ಮತಾಳಿದ್ದು, ಇದನ್ನು ಯಾವುದೇ ಧರ್ಮದೊಂದಿಗೆ ಸಂಬಂಧಿಸುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಬುಧವಾರ ಐತಿಹಾಸಿಕ ತೀರ್ಪು ನೀಡಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪುರಸಭೆಯ ಸೂಚನಾ ಫಲಕದಲ್ಲಿ ಉರ್ದು ಭಾಷೆಯ ಬಳಕೆಯನ್ನು ಎತ್ತಿಹಿಡಿದ ಕೋರ್ಟ್, ಭಾಷೆಯು
ಕೇಂದ್ರದ ವಿರುದ್ಧ ಸಿಡಿದೆದ್ದ ತಮಿಳುನಾಡು: ಸ್ವಾಯತ್ತತೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವ ಸಮಿತಿ ರಚನೆ
ಚೆನ್ನೈ: ಕೇಂದ್ರದ ಸರಕಾರದ ನೀತಿಗಳ ವಿರುದ್ಧ ಸಿಡಿದೆದ್ದಿರುವ ತಮಿಳುನಾಡು ಸರಕಾರವು ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ತಮಿಳುನಾಡು ರಾಜ್ಯದ ಸ್ವಾಯತ್ತತೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಶಬರಿಮಲೆ ಅಯ್ಯಪ್ಪನ ಚಿತ್ರದ ಚಿನ್ನದ ಲಾಕೆಟ್ ಬಿಡುಗಡೆ
ಶಬರಿಮಲೆ: ಇದೇ ಮೊದಲ ಬಾರಿಗೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ಅಯ್ಯಪ್ಪನ ಚಿತ್ರವಿರುವ ಚಿನ್ನದ ಲಾಕೆಟ್ ಪರಿಚಯಿಸಲಾಗಿದೆ. ವಿಷು ಹಬ್ಬದ ಶುಭ ದಿನದಂದು, ಶಬರಿಮಲೆ ಸನ್ನಿಧಾನವು ಭಕ್ತರ ಬಹುಕಾಲದ ಕನಸನ್ನು ನನಸು ಮಾಡಿದೆ. ಈ ಸಂದರ್ಭದಲ್ಲಿ ಶಬರಿಮಲೆ ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಚಿತ್ರವಿರುವ
ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ
ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ
ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಈ ವಾರಾಂತ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ
ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್
“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ
ಸೋನಿಯಾ, ರಾಹುಲ್ ವಿರುದ್ಧ ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ
20 ವರ್ಷ ಹಿಂದಿನ ಪ್ರಕರಣದಲ್ಲಿ ರಾಬರ್ಟ್ ವಾದ್ರಾ 8 ಗಂಟೆ ವಿಚಾರಣೆ!
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾಧ್ರಾ ಗಾಂಧಿ ಅವರ ಪತಿ ಹಾಗೂ ಉದ್ಯಮಿ ರಾಬಾರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. 2008ರಲ್ಲಿ ಹರಿಯಾಣದಲ್ಲಿ 7.5 ಕೋಟಿ ರೂ.ಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಚಾರ್ಜ್ ಶೀಟ್ ನಲ್ಲಿ ಸೋನಿಯಾ, ರಾಹುಲ್!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ. ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್




