ದೇಶ-ವಿದೇಶ
ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದಲ್ಲಿ ಶೇ.60.13 ಮತದಾನ
ಪಾಟ್ನಾ: ಭಾರೀ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಗೆ ಗುರುವಾರ ನಡೆದ ಮತದಾನದಲ್ಲಿ ಶೇ.60.13ರಷ್ಟು ಮತದಾನವಾಗಿದ್ದು, ಕಳೆದ 20 ವರ್ಷಗಳಲ್ಲೇ ಗರಿಷ್ಠ ಮತದಾನದ ದಾಖಲೆ ಬರೆದಿದೆ. ಕೇಂದ್ರ ಚುನಾವಣಾ ಆಯೋಗ ಈ ಮಾಹಿತಿ ನೀಡಿದ್ದು ಸಂಜೆ 5 ಗಂಟೆವರೆಗೆ ಬಿಹಾರದಲ್ಲಿ ಒಟ್ಟಾರೆ ಶೇ.60.13ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಬಿಹಾರ ವಿಧಾನಸಭೆಯ 121 ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಮತದಾನ ನಡೆದಿದೆ. ಬೆಳಿಗ್ಗೆಯಿಂದಲೇ ಚುರುಕಿನ ಮತದಾನವಾಗಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ನೇತೃತ್ವದ
ಬಿಹಾರ ಡಿಸಿಎಂ ಕಾರಿನ ಮೇಲೆ ಕಲ್ಲುತೂರಾಟ!
ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ. ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ
ನ್ಯಾಯಾಲಯ ನ್ಯಾಯದ ದೇವಾಲಯವೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ : ಸಿಜೆಐ ಭೂಷಣ್ ಗವಾಯಿ
ನ್ಯಾಯಾಲಯ ನ್ಯಾಯದ ದೇವಾಲಯವಾಗಬೇಕೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ, ಮುಂಬೈನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಾಂಬೆ ಹೈಕೋರ್ಟ್ ಸಂಕೀರ್ಣವು ದುಂದುಗಾರಿಕೆಯನ್ನು ತಪ್ಪಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಹೇಳಿದ್ದಾರೆ. ಬಾಂದ್ರಾ (ಪೂರ್ವ)ದಲ್ಲಿ ಸಂಕೀರ್ಣದ ಶಿಲಾನ್ಯಾಸ ನೆರವೇರಿಸಿದ ಮಾತನಾಡಿದ ಗವಾಯಿ, ಹೊಸ
ಪರೀಕ್ಷಾರ್ಥ ಸಂಚಾರ ವೇಳೆ ಮೋನೋ ರೈಲು ಅಪಘಾತ: ಮುವರು ಸಿಬ್ಬಂದಿಗೆ ಗಾಯ
ಪರೀಕ್ಷಾರ್ಥ ಸಂಚಾರದ ವೇಳೆ ಮೋನೋ ರೈಲು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಬುಧವಾರ ಸಂಭವಿಸಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ
ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಗುಜರಾತ್‌ನ ಮಹಿಳಾ ಟೆಕ್ಕಿ ಅರೆಸ್ಟ್
ಬೆಂಗಳೂರು ನಗರದ ಹಲವು ಶಾಲೆಗಳು ಮತ್ತು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಒಡ್ಡಿದ್ದ ಕಿಂಗ್‌ಪಿನ್ ಲೇಡಿ, ಮಹಿಳಾ ಟೆಕ್ಕಿಯನ್ನು ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುಜರಾತ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರೆನೆ ಜೋಶಿಲ್ಡಾ ಎಂದು ಪೊಲೀಸರು ತಿಳಿಸಿದ್ದಾರೆ.
ನೀರಾವರಿ ಯೋಜನೆಗಳ ಬಗ್ಗೆ ಬಾಯಿ ಬಿಡದ ರಾಜ್ಯ ಬಿಜೆಪಿ ಸಂಸದರು: ಡಿಸಿಎಂ ಕಿಡಿ
ನೀರಾವರಿ ಯೋಜನೆಗಳ ಬಗ್ಗೆ ಒಂದು ದಿನವೂ ರಾಜ್ಯ ಬಿಜೆಪಿ ಸಂಸದರು ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ
ಹರಿಯಾಣದಲ್ಲಿ 25 ಲಕ್ಷ ಮತಗಳವು: ರಾಹುಲ್ ಗಾಂಧಿ ಹೊಸ ಬಾಂಬ್
ಕೇಂದ್ರ ಚುನಾವಣಾ ಆಯೋಗ ವಿರುದ್ಧ ಮತಗಳವು ಎಂಬ ಹೈಡ್ರೋಜನ್ ಬಾಂಬ್ ಗಳ ಮೇಲೆ ಬಾಂಬ್ ಹಾಕುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಹೊಸ ಬಾಂಬ್ ಹಾಕಿದ್ದಾರೆ. ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ
ಅಂತಾರಾಷ್ಟ್ರೀಯ ಪೋರ್ನ್ ವೆಬ್ಸೈಟ್‌ಗಳಲ್ಲಿ ಗುಜರಾತ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ದೃಶ್ಯಗಳು
ಗುಜರಾತ್‌ನ ಒಂದು ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಿಭಾಗದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ಅಂತಾರಾಷ್ಟ್ರೀಯ ಪೋರ್ನ್ ವೆಬ್ಸೈಟ್‌ಗಳಲ್ಲಿ ಬಹಿರಂಗಗೊಂಡಿವೆ. ಈ ಮೂಲಕ ಮಹಿಳೆಯರ ಖಾಸಗಿ ಗೌಪ್ಯತೆಯ ಗಂಭೀರ ಉಲ್ಲಂಘನೆ ನಡೆದಿದ್ದು, ದುರ್ಬಲ ಪಾಸ್‌ವರ್ಡ್‌ಗಳೇ ಈ ಅನಾಹುತಕ್ಕೆ ಮುಖ್ಯ ಕಾರಣವೆಂದು ತನಿಖೆಯಲ್ಲಿ ತಿಳಿದುಬಂದಿದೆ. ಹ್ಯಾಕರ್‌ಗಳು
ಹಳಿ ದಾಟುತ್ತಿದ್ದವರ ಮೇಲೆ ಹರಿದ ರೈಲು: 6 ಮಂದಿ ದುರ್ಮರಣ
ಮಿರ್ಜಾಪುರ: ರೈಲ್ವೆ ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ಏಕಾಏಕಿ
ಬಿಹಾರದಲ್ಲಿ ನಾಳೆ ಮತದಾನ: ಜೆಡಿಯು ನಾಯಕ ಕುಶ್ವಾಹ ಮನೆಯಲ್ಲಿ ಮೂರು ಸಾವು
ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಮನೆಯಲ್ಲಿ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ, ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ




