ದೇಶ-ವಿದೇಶ
ಭಾರತಕ್ಕೆ ಬಂದಿಳಿದ ಅಮೆರಿಕದ 3ನೇ ವಿಮಾನ: 112 ವಲಸಿಗರು ವಾಪಸ್
ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಈ ಮೂಲಕ ಭಾರತಕ್ಕೆ ಗಡಿಪಾರು ಮಾಡಲಾದ ಭಾರತೀಯರ ಸಂಖ್ಯೆ 335ಕ್ಕೆ ಏರಿಕೆಯಾದಂತಾಗಿದೆ. ಈ ಬಾರಿ ಬಂದಿಳಿದ ಸಿಎಸ್-7 ವಿಮಾನದಲ್ಲಿ ಪಂಜಾಬ್ ನ 31, ಹರಿಯಾಣದ
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಕಂಪನ
ದೆಹಲಿ-ಎನ್‌ಸಿಆರ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಇಂದು (ಸೋಮವಾರ) ಪ್ರಬಲ ಭೂಕಂಪನದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.0 ರಷ್ಟಿತ್ತು. ಭೂಕಂಪದ ಕೇಂದ್ರಬಿಂದು ಧೌಲಾ ಕುವಾನ್ ಬಳಿಯ ಸರೋವರ ಉದ್ಯಾನವನದ ಬಳಿ ಇತ್ತು.
ಪಂಜಾಬ್‌ನಿಂದ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್‌ಲಿಫ್ಟ್
ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ
ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು
ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ
17 ವರ್ಷಗಳ ನಂತರ ಲಾಭ ಗಳಿಸಿದ ಬಿಎಸ್ಸೆನ್ನೆಲ್!
ಭಾರತೀಯ ಟೆಲಿಕಾಂ ಸಂಸ್ಥೆ ಬಿಎಸ್ಸೆನ್ನೆಲ್ ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಲಾಭ ಗಳಿಸಿ ಹೊಸ ದಾಖಲೆ ಬರೆದಿದೆ. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶುಕ್ರವಾರ ಸಬ್ ಸ್ಕ್ರೈಬ್
ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು
ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಬಸ್ ಗೆ ಡಿಕ್ಕಿ: 10 ಭಕ್ತರ ದುರ್ಮರಣ
ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ
ಮಾರ್ಚ್ 19ಕ್ಕೆ ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸ್!
ಬಾಹ್ಯಕಾಶದಲ್ಲಿ ಕೆಲವು ತಿಂಗಳಿಂದ ಸಿಲುಕಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಅಮೆರಿಕ ಬಾಹ್ಯಕಾಶ ಸಂಸ್ಥೆ ನಾಸಾ ಮಾರ್ಚ್ 10 ಮತ್ತು 11ರಂದು ಕ್ರ್ಯೂ-10 ಕಾರ್ಯಾಚರಣೆ ಆರಂಭಿಸಲಿದ್ದು, 8 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಇರುವ ಗಗನಯಾತ್ರಿಗಳಾದ ಸುನೀತಾ