ದೇಶ-ವಿದೇಶ
ಉಡುಪಿಯ ಯುವಕ ಅಬುಧಾಬಿಯಲ್ಲಿ ಖರೀದಿಸಿದ ಟಿಕೆಟ್‌ಗೆ ಬಂತು 49 ಕೋಟಿ ರೂ.
ಉಡುಪಿಯ ಯುವಕನೊಬ್ಬ ಸ್ನೇಹಿತನೊಂದಿಗೆ ಸೇರಿ ಖರೀದಿಸಿದ ಅಬುಧಾಬಿಯ ಲಕ್ಕಿ ಡ್ರಾನಲ್ಲಿ 49 ಕೋಟಿ ರೂ. ಬಹುಮಾನ ಲಭಿಸಿದೆ. ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದು, 20 ಮಿಲಿಯನ್ ದಿರಮ್ ಬಹುಮಾನ ಸಿಕ್ಕಿದೆ. ಅಬುಧಾಬಿಯಲ್ಲಿ ಬಿಗ್ ಟಿಕೆಟ್ ಲಕ್ಕಿ ಡ್ರಾ ನಡೆದಿತ್ತು. ಬಿಗ್ ಬಂಪರ್ ಜೊತೆಗೆ ಹೆಚ್ಚುವರಿ ಬಹುಮಾನಗಳು ಇದ್ದ ಲಕ್ಕಿ ಡ್ರಾ ಇದಾಗಿತ್ತು. ನೇರ ಪ್ರಸಾರ ಡ್ರಾದಲ್ಲಿ ಬಹುಮಾನ ಘೋಷಣೆ ಮಾಡಲಾಗಿದೆ. ಓಮನ್‌ನಲ್ಲಿ ಚಿಲ್ಲರೆ
ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆ
ಕೇರಳದ ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆಯಾವೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿಯ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಇದ್ದ ಜಿಲೆಟಿನ್ ಹಾಗೂ ಸ್ಪೋಟಕಗಳನ್ನು ಜಪ್ತಿ ಮಾಡಿದ್ದಾರೆ. ಪಾಲಕ್ಕಾಡ್
ದೆಹಲಿಯಲ್ಲಿ ಖಲಿಸ್ತಾನ್ ಪರ ಘೋಷಣೆ: ಖಲಿಸ್ತಾನಿ ಉಗ್ರರ ಸಂಪರ್ಕದಲ್ಲಿರುವ ಇಬ್ಬರ ಬಂಧನ
ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್‌ನ ಮುಖ್ಯಸ್ಥ ಕೆನಡಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್‌ಗೆ ಸಂಬಂಧಿಸಿದ ಸ್ಲೀಪರ್ ಸೆಲ್‌ನೊಂದಿಗೆ ಸಂಪರ್ಕವಿರುವ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗಣರಾಜ್ಯೋತ್ಸವಕ್ಕೆ ಮೊದಲು ದೆಹಲಿಯಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಸಾರ್ವಜನಿಕ ಸುವ್ಯವಸ್ಥೆಯನ್ನು ಭಂಗಗೊಳಿಸುವ
ನೈಜೀರಿಯಾದಲ್ಲಿ ಕಟ್ಟಿ ಹಾಕಿ 162 ಮಂದಿಯ ಬಲಿ ಪಡೆದ ಉಗ್ರರು, ಮನೆಗಳು ಭಸ್ಮ
ಪಶ್ಚಿಮ ನೈಜೀರಿಯಾದ ಎರಡು ಹಳ್ಳಿಗಳಲ್ಲಿ ಇಸ್ಲಾಮಿಕ್ ಉಗ್ರರು ಜನರನ್ನು ಕಟ್ಟಿಹಾಕಿ 162 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮನೆಗಳನ್ನು ಸುಟ್ಟು ಭಸ್ಮ ಮಾಡಿದ್ದು, ಅಂಗಡಿಗಳನ್ನು ಲೂಟಿ ಮಾಡಿದ್ದಾರೆ. ಕ್ವಾರಾ ರಾಜ್ಯದ ವೊರೊ ಮತ್ತು ನುಕು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿಗಳು ನಡೆದಿವೆ.
ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಸಂಸದ ಜೋಶಿ ಮನವಿ
ಬೆಂಗಳೂರು ಮತ್ತು ಪುಣೆ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ, ಬೆಂಗಳೂರು-ಪುಣೆ
ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ
ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆಗೆ ಭಾರತ ಬದ್ಧ: ಕ್ಯಾರೋಲಿನ್ ಲೀವಿಟ್
ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಸಾರಿಗೆ, ಇಂಧನ ಮತ್ತು ಕೃಷಿ ಕ್ಷೇತ್ರಗಳನ್ನು ಒಳಗೊಂಡಂತೆ ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆ ಮಾಡಲು ಹಾಗೂ ರಷ್ಯಾದಿಂದ ತೈಲ ಖರೀದಿಸದಿರಲು ಭಾರತ ಬದ್ಧವಾಗಿದೆ ಎಂದು ವೈಟ್ ಹೌಸ್ ಪ್ರೆಸ್ ಸೆಕ್ರಟರಿ ಕ್ಯಾರೋಲಿನ್ ಲೀವಿಟ್
ಆನ್‌ಲೈನ್ ಗೇಮ್ ಬೇಡವೆಂದು ಬಯ್ದಿದ್ದಕ್ಕೆ ಮೂವರು ಸೋದರಿಯರು ಸುಸೈಡ್
ಆನ್‌ಲೈನ್ ಗೇಮ್ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಗದರಿದಕ್ಕೆ ಮೂವರು ಸೋದರಿಯರು ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪಖಿ (12),
ಅಪರಿಚಿತರಿಂದ ಮುಅಮ್ಮರ್ ಗಡಾಫಿಯ ಪುತ್ರ ಸೈಪ್‌ಗೆ ಗುಂಡಿಕ್ಕಿ ಹತ್ಯೆ
ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಅಪರಿಚಿತ ಬಂದೂಕುಧಾರಿಗಳು ಜಿಂಟಾನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2021ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯತ್ನಿಸಿದ್ದ ಸೈಪ್‌ಗೆ ತೀವ್ರ ವಿರೋಧ ಎದುರಾಗಿತ್ತು. 53 ವರ್ಷದ ಸೈಫ್ ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ
ವಾಟ್ಸಾಪ್ ಪ್ರೈವೇಟ್ ಡೇಟಾ ಶೇರಿಂಗ್: ಭಾರತದಿಂದ ಹೊರ ಹೋಗಿ ಎಂದ ಸುಪ್ರೀಂ
ಬಳಕೆದಾರರ ದತ್ತಾಂಶ ಹಂಚಿಕೆ ಮತ್ತು ಖಾಸಗಿತನದ ಉಲ್ಲಂಘನೆ ಸಂಬಂಧ ಸುಪ್ರೀಂ ಕೋರ್ಟ್ ವಾಟ್ಸಾಪ್ ನೀತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದ ನಿಯಮಗಳನ್ನು ಅನುಸರಿಸದಿದ್ದರೆ ಭಾರತದಿಂದ ಹೊರಗೆ ಹೋಗಿ ಎಂದು ಮೆಟಾಗೆ ಸೂಚಿಸಿದೆ. ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾ




