Thursday, November 06, 2025
Menu

ಪ್ರಧಾನಿ ಮೋದಿಗೆ ಶ್ರೀಲಂಕಾದ ಮಿತ್ರ ವಿಭೂಷಣ ಗೌರವ

ಕೊಲಂಬೋ: ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಮಿತ್ರ ವಿಭೂಷಣ’ ಪದಕವನ್ನು ನೀಡಲಾಯಿತು. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶನಿವಾರ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪದಕವನ್ನು ಪ್ರಧಾನ ಮಾಡಿದರು. ಈ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷ ದಿಸಾನಾಯಕೆಗೆ ಧನ್ಯವಾದ ಹೇಳಿದ್ದು, ಈ ಗೌರವವನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ್ದಾರೆ. “ಇದು ಶ್ರೀಲಂಕಾ ಮತ್ತು

ನೀಟ್ ಪರೀಕ್ಷೆ ವಿನಾಯಿತಿ: ತಮಿಳುನಾಡು ಮನವಿ ತಿರಸ್ಕರಿಸಿದ ಕೇಂದ್ರ

ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯದ ಸ್ವಾಯತ್ತತೆ ನೀಡುವ ಉದ್ದೇಶದಿಂದ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ್ದ ಮಸೂದೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರಕಿಲ್ಲ. ನೀಟ್ ಪರೀಕ್ಷೆಯಿಂದ ವಿನಾಯಿತಿ ಕೋರಿದ್ದ ತಮಿಳುನಾಡಿನ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಡಿಎಂಕೆ ಸರ್ಕಾರವು ೨೦೨೧ರಲ್ಲಿ ನೀಟ್‌ಪರೀಕ್ಷೆಯಿಂದ ವಿನಾಯಿತಿ

ಅಮೆರಿಕ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಘೋಷಿಸಿದ ಚೀನಾ

ಅಮೆರಿಕದ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಹಾಕುವುದಾಗಿ ಘೋಷಿಸುವ ಮೂಲಕ ಚೀನಾ ಅಮೆರಿಕದೊಂದಿಗೆ ತೆರಿಗೆ ಯುದ್ಧ ಸಾರಿದೆ. ತನ್ನ ಉತ್ಪನ್ನಗಳ ಮೇಲೆ ಶೇ.34ರಷ್ಟು ಪ್ರತಿತೆರಿಗೆ ಹಾಕಿದ ಅಮೆರಿಕದ ವಿರುದ್ಧ ಸಿಡಿದೆದ್ದಿರುವ ಚೀನಾ, ಕೆನಡಾ ಅಮೆರಿಕದ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ

ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿರ್ಬಂಧ: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ

ಹದಿಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಿ ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ ಎಂದು ಸುಪ್ರೀಂಕೋರ್ಟ್‌

ನಕಲಿ ಕಲಬೆರಕೆ ಪನೀರ್‌ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ

ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ

ಕೊಯಮತ್ತೂರು: ಎಐಎಡಿಎಂ ಮತ್ತು ಬಿಜೆಪಿ ಮುಂಬರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ

ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ

ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು

ಬಾವಿಗೆ ಬಿದ್ದಾತನ ರಕ್ಷಣೆಗೆ ಸರದಿಯಲ್ಲಿ ಹೋದ ಏಳು ಮಂದಿಯೂ ಸಾವು

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿದ್ದವರು ಸೇರಿ ಎಂಟು ಮಂದಿ ಉಸಿರುಕಟ್ಟಿ ಪ್ರಾಣ ಕಳೆದುಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದ ಕೊಂಡಾವತ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರಾದ 8 ಜನರೂ

ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ

1995ರ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಸೂದೆ ಪರ ೧೨೮, ವಿರುದ್ಧ ೯೫ ಮತಗಳು ಬಂದಿವೆ. ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು

ಬಾಲಿವುಡ್‌ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್‌ ಕುಮಾರ್‌ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.