ದೇಶ-ವಿದೇಶ
ಅಮೆರಿಕಕ್ಕಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧಕ್ಕೆ ಸಿದ್ಧವೆಂದ ಟ್ರಂಪ್
ಅಮೆರಿಕದ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧ ಮಾಡಲು ಸಿದ್ಧ ಎಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಏ.2ಅಮೆರಿಕದ ವಿಮೋಚನಾ ದಿನ ಎಂದು ಘೋಷಿಸಿರುವ ಟ್ರಂಪ್, ಅಮೆರಿಕ ದೊಂದಿಗೆ ವ್ಯವಹರಿಸುವ ಎಲ್ಲಾ ದೇಶಗಳ ಮೇಲೆ ಸುಂಕ ಹೆಚ್ಚಳ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಏರ್‌ಫೋರ್ಸ್ ಒನ್ ವಿಮಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಮೆರಿಕದ ವ್ಯಾಪಾರ ಹಿತಾಸಕ್ತಿ ಗಳನ್ನು ಕಾಪಾಡಿಕೊಳ್ಳಲು ಇಡೀ ಜಗತ್ತಿನೊಂದಿಗೆ ಸುಂಕ ಸಮರ ಮಾಡಲು ಸಿದ್ಧನಿದ್ದೇನೆ. ಇದರ ಫಲಿತಾಂಶ
ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ
ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ
ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ: ಟ್ರಾಫಿಕ್ ಪೊಲೀಸ್ ಅಲರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು
ನಾಳೆ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ಸಾಧ್ಯತೆ
ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ
ಮ್ಯಾನ್ಮರ್ ನಲ್ಲಿ 2 ಸಾವಿರ ದಾಟಿದ ಭೂಕಂಪನ ಸಾವಿನ ಸಂಖ್ಯೆ, ಒಂದು ವಾರ ಮೌನಾಚರಣೆ
ಮ್ಯಾನ್ಮರ್ ನಲ್ಲಿ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 2000 ದಾಟಿದ್ದು, ಒಂದು ವಾರ ಮೌನಾಚರಣೆಗೆ ಸರ್ಕಾರ ಆದೇಶಿಸಿದೆ. ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆಯಾಗಿದ್ದು, ಇನ್ನೂ 219 ಮಂದಿ ನಾಪತ್ತೆಯಾಗಿ ದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಭವಿಸಿದ ಭೀಕರ
ಕುಂಭಮೇಳದ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕನ ಬಂಧನ
ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕ ದೆಹಲಿ ಪೊಲೀಸರು ಬಂಧಿಸಿ ದ್ದಾರೆ. ಮುಂಬೈನಲ್ಲಿ
ಸಿಲಿಂಡರ್ ಸ್ಫೋಟದಿಂದ ಪಟಾಕಿಗೆ ಬೆಂಕಿ: 3 ಮಕ್ಕಳು ಸೇರಿ 7 ಮಂದಿ ಸಾವು
ಸಿಲಿಂಡರ್ ಸ್ಫೋಟದಿಂದ ಪಟಾಕಿಗೆ ತಗುಲಿದ ಬೆಂಕಿಯಿಂದ ಮೂರು ಮಕ್ಕಳು ಸೇರಿ 7 ಮಂದಿ ಮೃತಪಟ್ಟ ದಾರುಣ ಘಟನೆ ಪಶ್ಚಿಮ ಬಂಗಾಳದಲ್ಲಿ ಸೋಮವಾರ ಸಂಭವಿಸಿದೆ. ದಕ್ಷಿಣ ಬಂಗಾಳದ 24 ಪರಗಾನ್ಸ್ ನಲ್ಲಿ ಧೋಲಾಹಟ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಸ್ಫೋಟದಿಂದ ಇಡೀ ಕಟ್ಟಡಕ್ಕೆ
ನ್ಯಾಮತಿಯಲ್ಲಿ ಕದ್ದ ಚಿನ್ನ ತಮಿಳುನಾಡಿನ ಪಾಳುಬಾವಿಯಲ್ಲಿ ಪತ್ತೆ
ದಾವಣಗೆರೆಯ ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ನಡೆದು ಆರು ತಿಂಗಳ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಮತ್ತಿತರ ವಿವರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ
ಬೇಸಿಗೆಯಲ್ಲಿ ಬೆಂಗಳೂರು-ಮುಂಬೈ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಬೆಂಗಳೂರು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ
ಟ್ರಂಪ್ ಬೆದರಿಕೆಗೆ ಪ್ರತ್ಯುತ್ತರವಾಗಿ ದೈತ್ಯ ಕ್ಷಿಪಣಿ ಸಜ್ಜುಗೊಳಿಸಿದ ಇರಾನ್
ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಸಿದ ಬೆನ್ನಲ್ಲೇ ಪ್ರತ್ಯುತ್ತರ ನೀಡಲು ಇರಾನ್ ಮುಂದಾಗಿದ್ದು, ದೇಶದಲ್ಲಿ ಸಶಸ್ತ್ರ ಪಡೆಗಳು ಉಡಾವಣೆಗಾಗಿ ದೈತ್ಯ ಕ್ಷಿಪಣಿಗಳನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಮೆರಿಕ




