ದೇಶ-ವಿದೇಶ
ಪೂಜೆ, ಚಿಕಿತ್ಸೆ ಹೆಸರಲ್ಲಿ ವಿಷ ಲಡ್ಡು ತಿನ್ನಿಸಿ ಆರು ಮಂದಿಯ ಕೊಲೆಗೈದ ಫಕೀರ್ ಬಾಬಾ ಅರೆಸ್ಟ್
ಇತ್ತೀಚೆಗೆ ದೆಹಲಿಯ ಪೀರಾಗಢಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನೊಳಗೆ ಮೂರು ಶವಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಫಕೀರ್ ಬಾಬಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಇದೇ ರೀತಿ ಕನಿಷ್ಠ ಐದು ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಆತ ಆರು ಕೊಲೆ ಮಾಡಿರುವುದು ಪತ್ತೆಯಾಗಿದೆ. ಫಿರೋಝಾಬಾದ್ ನಿವಾಸಿಮರುದ್ದೀನ್ ಅಲಿಯಾಸ್ ‘ಬಾಬಾ’ ಆರೋಪಿಯಾಗಿದ್ದು, ಪೂಜೆ, ಆಧ್ಯಾತ್ಮಿಕ ಚಿಕಿತ್ಸೆ ಹೆಸರಿನಲ್ಲಿ ಜನರಿಗೆ ವಿಷ ಬೆರೆಸಿದ ಲಡ್ಡುಗಳನ್ನು ತಿನ್ನಿಸುತ್ತಿದ್ದ ಎನ್ನಲಾಗಿದೆ.
ಬ್ಯಾಂಕಾಕ್‌ನಿಂದ ಕ್ಯಾಂಡಿಗಳಲ್ಲಿ ಬೆಂಗಳೂರಿಗೆ ಬಂತು ಡ್ರಗ್ಸ್
ಬೆಂಗಳೂರು ದೇವನಹಳ್ಳಿಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳುಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕ್ಯಾಂಡಿ ಪ್ಯಾಕೆಟ್‌ಗಳಲಿ ಅಡಗಿಸಿಟ್ಟಿದ್ದ ಒಟ್ಟು 3.43 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ
ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್ ಬಂದ್
ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು (ಗುರುವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳ ರದ್ದು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ,
ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಕಡ್ಡಾಯ
‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆ ಹಾಡಬೇಕು ಅಥವಾ ನುಡಿಸಬೇಕು ಎಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ್ದು, ಪದ್ಮ ಪ್ರಶಸ್ತಿ
ಕೆನಡಾ ಶಾಲೆಯಲ್ಲಿ ಗುಂಡಿನ ಘರ್ಜನೆ: ಹತ್ತು ಮಂದಿ ಸಾವು
ಕೆನಡಾದ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗನ್ ಮ್ಯಾನ್ ಸೇರಿದಂತೆ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಗನ್‌ಮ್ಯಾನ್ ಹಾಗೂ ಇತರ ಆರು ಮಂದಿ ಶಾಲಾ ಆವರಣದಲ್ಲೇ
24 ಕೊಲೆ ಕೇಸ್: ಬಿಹಾರ ಆರೋಪಿಗಳಾದ ತಂದೆ, ಮಗ ಬೆಂಗಳೂರಿನಲ್ಲಿ ಅರೆಸ್ಟ್
24 ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಬಿಹಾರದ ಅಪ್ಪ ಮಗನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಅಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಮಣಿಕ್ ಸಿಂಗ್ ಹಾಗೂ ಆತನ ತಂದೆ ಮನೋಜ್
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಕೆ
ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟಿಸ್ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಟಿಎಂಸಿ ನಾಯಕರು ಈ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿಲ್ಲ. ನಿಯಮ 94ಸಿ ಅಡಿಯಲ್ಲಿ ಕಾಂಗ್ರೆಸ್ ಅವಿಶ್ವಾಸ
ಮಥುರಾದಲ್ಲಿ ಒಂದೇ ಕುಟುಂಬದ ಐವರು ಸುಸೈಡ್
ಉತ್ತರ ಪ್ರದೇಶದ ಮಥುರಾದಲ್ಲಿ ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ರಾತ್ರಿ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎನ್ನಲಾಗಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ
ಸತ್ಯ ಎದುರಿಸಲಾಗದ ಹೇಡಿತನ, ಸಂಸತ್‌ಗೆ ಅಗೌರವ ತೋರಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ
ಕೆನಡಾದಲ್ಲಿ ಗುಂಡಿನ ದಾಳಿಗೆ ಬೆಂಗಳೂರಿನ ಯುವಕ ಬಲಿ
ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬೆಂಗಳೂರಿನ ನೆಲಮಂಗಲ ಚಂದನ್ ಕುಮಾರ್(37) ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲುವಿನ ನಿವಾಸಿ. ಆರು ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಚಂದನ್




