ದೇಶ-ವಿದೇಶ
ಜನವರಿ 20ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪ್ರಮಾಣ ವಚನ?
ನವದೆಹಲಿ: ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ನೇಮಕಗೊಳ್ಳುವ ಸಾಧ್ಯತೆ ಇದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್ ನಬಿನ್ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅಧ್ಯಕ್ಷರ ಚುನಾವಣೆಗೆ ನಾಮ ನಿರ್ದೇಶನಗಳು ಜನವರಿ 19 ರಂದು ನಡೆಯಲಿದ್ದು, ಮರುದಿನ ಚುನಾವಣೆ ನಡೆಯಲಿದೆ. ಅದೇ ದಿನ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ,
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ತೊಂದರೆಯಾಗಿದ್ದು, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 10 ರಂದು ಶೌಚಾಲಯಕ್ಕೆ ಹೋದಾಗ ಅವರು ಎರಡು ಬಾರಿ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.
ಆರ್ಕೆಸ್ಟ್ರಾ ಡಾನ್ಸರ್ ಮೇಲೆ ಗ್ಯಾಂಗ್ ರೇಪ್: ಆರೋಪಿಯ ಮೊಬೈಲ್‌ನಿಂದ ಪೊಲೀಸ್‌ಗೆ ಕರೆ ಮಾಡಿದ ಸಂತ್ರಸ್ತೆ
ಆರ್ಕೆಸ್ಟ್ರಾ ನರ್ತಕಿಯನ್ನು ಅಪಹರಿಸಿದ ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ ಸಂತ್ರಸ್ತೆ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಬಂದು ಆಕೆಯನ್ನು ರಕ್ಷಿಸಿ ಒಬ್ಬ
ಇರಾನ್ ಜೊತೆ ವ್ಯಾಪಾರ ಮಾಡುವವರಿಗೆ ಶೇ.25 ಸುಂಕ: ಟ್ರಂಪ್
ಇರಾನ್ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೇನಾ ಕಾರ್ಯಾಚರಣೆ ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮನವಿ: ಟ್ರಂಪ್
ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನಲ್ಲಿ
16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ
ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು
‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್
ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116
ಇರಾನ್ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ. ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ
ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್ ಸೆಕ್ರಟರಿ ಜನರಲ್ ಪ್ರಶಸ್ತಿ
ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್
ವಿಚ್ಚೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಮಗು ಕೊಟ್ಟು, 36 ಲಕ್ಷ ರೂ. ವಂಚನೆ!
ವಿಚ್ಚೇದಿತ ಮಹಿಳೆಗೆ ಬಾಳು ಕೊಡುವುದಾಗಿ ನಂಬಿಸಿದ ಯುವಕನೊಬ್ಬ ಆಕೆಗೆ ಮಗು ಕರುಣಿಸಿದ್ದೂ ಅಲ್ಲದೇ 36 ಲಕ್ಷ ರೂ. ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಂಚನೆ ವಿರುದ್ಧದ ಬನಶಂಕರಿ ಪೊಲೀಸ್ ಠಾಣೆಗೆ ದೂರು




