Menu

ಅಜ್ಮೀರ್‌ ದರ್ಗಾಗೆ ಪಿಎಂಒ ಚಾದರ್‌ ಅರ್ಪಣೆಗೆ ತಡೆ ಕೋರಿದ್ದ ಮನವಿ ನಿರಾಕರಿಸಿದ ಸುಪ್ರೀಂ

ಪ್ರಧಾನಮಂತ್ರಿಗಳ ಕಚೇರಿಯಿಂದ ಅಜ್ಮೀರ್‌ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಉರುಸ್‌ ವೇಳೆ ಚಾದರ್ ಸಮರ್ಪಣೆ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ತುರ್ತು ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ದರ್ಗಾವು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಎಂದು ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತಾ ಸಲ್ಲಿಸಿರುವ ಮೊಕದ್ದಮೆ ಬಾಕಿ ಇರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ನ ಈ ನಿರ್ಧಾರ ಮಹತ್ವದ್ದಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಕರಣ ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದು

ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್‌ ನೋಟಿಸ್‌

ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಟಿಟಿಡಿ ಮಾಜಿ ಅಧ್ಯಕ್ಷ, ಎಂಪಿಯಾಗಿದ್ದ ಆದಿಕೇಶವುಲು ನಾಯ್ಡು ಆಪ್ತ ಸಾವು: ಆದಿಕೇಶವುಲು ನಾಯ್ಡು ಮಗಳು, ಮಗನ ಬಂಧನ

ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು ಅವರ ಆಪ್ತ ಹಾಗೂ ಉದ್ಯಮಿ ರಘುನಾಥ್ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿಕೇಶವುಲು ಅವರ ಮಗಳು ಕಲ್ಪಜ ಮತ್ತು ಮಗ ಶ್ರೀನಿವಾಸ್‌ ಅವರನ್ನು ಸಿಬಿಐ ಬಂಧಿಸಿದೆ.

ಚಿನ್ನಕ್ಕಾಗಿ ಅಜ್ಜಿಯ ಕೊಲೆಗೈದ ಮೊಮ್ಮಗ: ಪತ್ತೆ ಹಚ್ಚಿದ ನಾಯಿಗಳು

ಚಿನ್ನಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗನ ಕ್ರೌರ್ಯವನ್ನು ತನಿಖೆಯಲ್ಲಿ ಭಾಗವಹಿಸಿದ್ದ ಶ್ವಾನದಳದ ನಾಯಿಗಳು ಬಯಲು ಮಾಡಿವೆ. ಆಂಧ್ರದ ವಿಜಯನಗರ ಭೋಗಾಪುರಂ ಮಂಡಲದ ಮುಡಸಲಪೇಟೆ ವಿಮಾನ ನಿಲ್ದಾಣ ಕಾಲೊನಿಯಲ್ಲಿ ನಡೆದ ವೃದ್ಧ ಮಹಿಳೆಯ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯಾಗಿರುವ ಮೊಮ್ಮಗನನ್ನು ಬಂಧಿಸಿದ್ದಾರೆ.

ಪಾಕ್‌ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್‌

ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್​​ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಗುತ್ತಿಗೆ

ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ

ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ

ಉಡುಗೊರೆಯಲ್ಲಿ ಭ್ರಷ್ಟಾಚಾರ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ದಂಪತಿಗೆ 17 ವರ್ಷ ಜೈಲು

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪತ್ನಿಗೆ ಬುಶಾರಾ ಬಿಡಿಗೆ ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ತೆಹರಿಕ್‌ ಇ ಇನ್ಸಾಫ್‌ ಪಕ್ಷದ ನಾಯಕ ಇಮ್ರಾನ್‌ ಮತ್ತು ಪತ್ನಿ ಬುಶಾರಾ ಬಿಡಿ

ರೈಲು ಡಿಕ್ಕಿ ಹೊಡೆದು 8 ಆನೆ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್‌ ಪ್ರೆಸ್‌ 5 ಬೋಗಿ

ರಾಜಧಾನಿ ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, ೫ ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್‌ ಪ್ರೆಸ್‌ ರೈಲು ಅಸ್ಸಾಂನ ಹೊಜಯ್‌ ನಲ್ಲಿ ಶನಿವಾರ ಮುಂಜಾನೆ ಈ

ನಾಲ್ಕು ಲಕ್ಷ ರೂ. ಬೆಲೆಯ ಸೆಕ್ಸ್‌ ಡಾಲ್ಸ್‌ ಖರೀದಿಯಲ್ಲಿ ಕರ್ನಾಟಕದ ಪುರುಷರೇ ಫಸ್ಟ್‌

ಭಾರತದಲ್ಲಿ ಸೆಕ್ಸ್‌ ಡಾಲ್ಸ್‌ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ಆ ಗೊಂಬೆಗಳ ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ. ನಾನಾ ಕಾರಣಗಳಿಂದ ಒಂಟಿಯಾಗಿರುವ ಪುರುಷರು ಈ ಒಂಟಿತನ ನೀಗಿಸಿಕೊಳ್ಳಲು ದುಬಾರಿ

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ

ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್