Menu

ಅನುಮತಿಯಿಲ್ಲದೆ ದೇಶ ತೊರೆಯಲ್ಲ: ಸುಪ್ರೀಂಗೆ ಅನಿಲ್‌ ಅಂಬಾನಿ ಮುಚ್ಚಳಿಕೆ

ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ತಾನು ಭಾರತ ತೊರೆಯುವುದಿಲ್ಲ ಹಾಗೂ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹ ಸಂಸ್ಥೆಗಳು ವಂಚನೆ ಎಸಗಿರುವ ಆರೋಪದ ತನಿಖೆಗೆ ಸಹಕರಿಸುತ್ತೇನೆ ಎಂದು ಉದ್ಯಮಿ ಅನಿಲ್ ಅಂಬಾನಿ ಸುಪ್ರೀಂಕೋರ್ಟ್‌ಗೆ ಮುಚ್ಚಳಿಕೆ ಸಲ್ಲಿಸಿದ್ದಾರೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಹಾಗೂ ಅದರ ಸಮೂಹ ಸಂಸ್ಥೆಗಳು ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಬಿಐ ತನಿಖೆ ನಡೆಸುತ್ತಿವೆ. ಕೇಂದ್ರ ಸರ್ಕಾರದ ನಿವೃತ್ತ ಕಾರ್ಯದರ್ಶಿ ಇಎಎಸ್ ಶರ್ಮಾ ವಂಚನೆ ಸಂಬಂಧ ಪಿಐಎಲ್ ಸಲ್ಲಿಸಿದ್ದರು. ತಾನು ಜುಲೈ

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ

ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ,

ನೌಕಾಪಡೆ ಮಾಹಿತಿ ಪಾಕ್‌ಗೆ ರವಾನೆ: ಉಡುಪಿಯಲ್ಲಿ ಮತ್ತೊಬ್ಬ ಅರೆಸ್ಟ್‌

ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬನನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೌಪ್ಯ ಮಾಹಿತಿಯನ್ನು

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲ, ಮೊಟ್ಟೆ ಮರಗೆಣಸು ಸೇವಿಸಿದ ಇಬ್ಬರ ಸಾವು

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲೆ, ಮೊಟ್ಟೆ ಮರಗೆಣಸು ಜೊತೆ ಪರೋಟ ತಿಂದು ಊಟ ಮುಗಿಸಿ ಹೊರಟ ಕೆಲವೇ ಕ್ಷಣಗಳಲ್ಲಿ ಇಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೇರಳದ ವಿಳಿಂಜಂನಲ್ಲಿ ನಡೆದಿದೆ. ವಿಳಿಂಜಂನ ‘ಅಸ್ಮಾಕ್’ ಹೋಟೆಲ್‌ನಲ್ಲಿ ಊಟ ಮಾಡಿದ್ದ ಕೊಲ್ಲಂ ನಿವಾಸಿಗಳಾದ ಶಾಜಿ ಮತ್ತು ಅವರ

ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ

ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ. ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ: ಏ.7 ರಿಂದ ಸುಪ್ರೀಂ ವಿಚಾರಣೆ

ಶಬರಿಮಲೆ ದೇಗುಲ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಏ.7 ರಿಂದ ವಿಚಾರಣೆ ನಡೆಯಲಿದೆ. ಒಂಬತ್ತು ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ಏ.22ಗೊಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ. ಏಪ್ರಿಲ್

ಪಿಯು, ಡಿಗ್ರಿ ಮುಗಿಸಿದ ನಕಲಿ ವೈದ್ಯರಿಂದ ಸಿಸೇರಿಯನ್‌: ಮಹಿಳೆ ಸಾವು

ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಬಿಎ ಪದವೀಧರ ಐದು ವರ್ಷಗಳಿಂದ ಅಕ್ರಮ  ಆಸ್ಪತ್ರೆಯೊಂದರಲ್ಲಿ  ವೈದ್ಯರಾಗಿದ್ದು, ಗರ್ಭಿಣಿಗೆ ಸಿಸೇರಿಯನ್‌ ಮಾಡಲು ಹೋಗಿ ಪ್ರಾಣ ಕಸಿದಿದ್ದಾರೆ.  ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೆ-ಸೆಕ್ಷನ್

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಕಾರ್ಮಿಕರು ಸಜೀವ ದಹನ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಘಟನೆ ನಡೆದಾಗ 25 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದೆ. ಈ ಕಾರ್ಖಾನೆಯನ್ನು ವ್ಯಕ್ತಿಯೊಬ್ಬರು

ಆರ್ಥಿಕ ನಿರ್ಬಂಧ ತೆರವು ಮನಸ್ಸಿದ್ದರೆ ಅಮೆರಿಕದೊಂದಿಗೆ ಪರಮಾಣು ಒಪ್ಪಂದಕ್ಕೆ ಸಿದ್ಧವೆಂದ ಇರಾನ್‌

ಅಮೆರಿಕವು ಆರ್ಥಿಕ ನಿರ್ಬಂಧ ತೆರವು ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದ ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಇರಾನ್ ತಿಳಿಸಿದೆ. ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಕೇದಾರನಾಥ ದರ್ಶನ ಏಪ್ರಿಲ್‌ 22 ರಿಂದ

ಉತ್ತರಾಖಂಡ್‌ನ ಹನ್ನೆರಡು ಜ್ಯೋತಿರ್‌ ಲಿಂಗಗಳಲ್ಲಿ ಒಂದಾಗಿರುವ ಕೇದಾರನಾಥ ಧಾಮ ಯಾತ್ರಿಗಳ ದರ್ಶನಕ್ಕೆ ಏಪ್ರಿಲ್‌ 22ರಂದು ತೆರೆಯಲಿದೆ.  ಅಂದು ಬೆಲಗ್ಗೆ ವೃಷಭ ಲಗ್ನದಲ್ಲಿ ಎಂಟು ಗಂಟೆಗೆ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಟಿ ಗಂಗಾಧರ ಲಿಂಗ್ ಅವರನ್ನು ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರನ್ನಾಗಿ ನೇಮಿಸಲಾಗಿದ್ದು,