Menu

ಆಂಧ್ರಪ್ರದೇಶದ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಬೆಂಕಿಗೆ ಆರು ಕಾರ್ಮಿಕರು ಬಲಿ

ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಪಟಾಕಿ ತಯಾರಿಕೆ ಘಟಕವೊಂದರಲ್ಲಿ ಬೃಹತ್‌ ಸ್ಫೋಟ ಸಂಭವಿಸಿ ಆರು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕೆ ಕೇಂದ್ರದಲ್ಲಿ ಪಟಾಕಿ ತಯಾರಿಸುತ್ತಿದ್ದಾಗ ಈ ಅಗ್ನಿ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ

ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ

ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಇನ್ಮುಂದೆ ರೈಲು ಟಿಕೆಟ್‌ ದಿನಾಂಕ ಬದಲಾವಣೆಗೆ ಅವಕಾಶ

ರೈಲು ಪ್ರಯಾಣಿಕರು ರೈಲು ಟಿಕೆಟ್‌ ಬುಕ್‌ ಮಾಡಿದ್ದರೆ ಇನ್ಮುಂದೆ ದಿನಾಂಕ ಬದಲಾವಣೆ ಮಾಡಲು ಸಾಧ್ಯವಾಗಲಿದೆ. ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಒಮ್ಮೆ ರೈಲ್ವೆ ಟಿಕೆಟ್ ಬುಕ್

ಕೆಮ್ಮು ಸಿರಪ್‌: ಮಧ್ಯಪ್ರದೇಶದಲ್ಲಿ ಮತ್ತೆ ಆರು ಮಕ್ಕಳ ಸಾವು

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಆರು ಮಕ್ಕಳು ಮತ್ತೆ ಮೃತಪಟ್ಟಿದ್ದು, ಈ ರಾಜ್ಯದಲ್ಲಿ ಕೆಮ್ಮು ಸಿರಪ್‌ ಸೇವನೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್

ಸಿಜೆಐ ಮೇಲೆ ಷೂ ಎಸೆತ: ಸುಪ್ರೀಂಕೋರ್ಟ್‌ಗೆ ಮಾಡಿದ ಅಪಚಾರ

ಸಹನೆ ಮತ್ತು ವೃತ್ತಿ ಸಂಹಿತೆಯನ್ನು ಕಾಪಾಡಿಕೊಳ್ಳಬೇಕಿರುವ ಜ್ಞಾನಸಂಪನ್ನ ನ್ಯಾಯವಾದಿಯೊಬ್ಬರು (ಲರ್ನೆಡ್ ಕೌನ್ಸಿಲ್) ಎಸಗಿದ ಈ ಕೃತ್ಯವೊಂದು ಎಪ್ಪತೈದು ವರ್ಷಗಳ ಸುಪ್ರೀಂಕೋರ್ಟ್ ಇತಿಹಾಸದಲ್ಲಿ ಕಪ್ಪು ಮಚ್ಚೆ. ವಕೀಲರು ಅಪಮಾನ ಎಸಗಿದ್ದು ಸುಪ್ರೀಂಕೋರ್ಟಿಗೆ. ಸಿಜೆಐ ಅವರಿಗಲ್ಲ. ಸುಪ್ರೀಂಕೋರ್ಟ್‌ನಲ್ಲಿ ಹೀಗೊಂದು ದುರದೃಷ್ಟಕರ ಘಟನೆ. ಪ್ರಜಾತಂತ್ರಕ್ಕೆ ಘೋರ

ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್‌ ಪುಂಗಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು

ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಮುಂಬರುವ ಚುನಾವಣೆಗೆ ಮಾದರಿ

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣೆ ಆಯೋಗ ಬಹಳ ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ. ಈ ಚುನಾವಣೆ ಮುಂದೆ ಬರುವ ಎಲ್ಲ ಚುನಾವಣೆಗಳಿಗೆ ಮಾದರಿಯಾಗಲಿದೆ. ಚುನಾವಣೆಗೆ ಮುನ್ನ ಆಯೋಗ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿತು. ಇದಕ್ಕೆ

ಬಿಹಾರದಲ್ಲಿ ನವೆಂಬರ್ 6, 11 ಮತದಾನ; 14ರಂದು ಫಲಿತಾಂಶ

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗ ಸೋಮವಾರ ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆ

ತುಂಡುಡುಗೆಯಲ್ಲಿ ದೇಗುಲ ಪ್ರವೇಶ ನಿರಾಕರಣೆ: ಅರ್ಚಕರು-ಪೊಲೀಸರೊಂದಿಗೆ ಯುವತಿ ಜಗಳ

ಹರಿದ್ವಾರದ ದಕ್ಷಿಣ ಕಾಳಿ ದೇಗುಲಕ್ಕೆ ಅರೆಬರೆ ಬಟ್ಟೆ ಧರಿಸಿ ಬಂದಿದ್ದ ಯುವತಿ ಪ್ರವೇಶ ನಿರಾಕರಿಸಿದ್ದಕ್ಕೆ ಸಿಟ್ಟಾಗಿ ಅರ್ಚಕರು ಮತ್ತು ಪೊಲೀಸರೊಂದಿಗೆ ಗಲಾಟೆ ಮಾಡಿರುವ ವೀಡಿಯೊ ವೈರಲ್‌ ಆಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯುವತಿ ಮೊಣಕಾಲಿಗಿಂತ ಮೇಲೆ ನಿಲ್ಲುವ ಶಾರ್ಟ್ಸ್ ಮತ್ತು ಟೀ