Menu

ರೈಲಿನಿಂದ ಎಸೆದ ನೀರಿನ ಬಾಟಲಿ ಎದೆಗೆ ಬಡಿದು ಬಾಲಕ ಸಾವು

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ರೈಲಿನಿಂದ ಪ್ರಯಾಣಿಕರು ಎಸೆದ ನೀರಿನ ಬಾಟಲಿ ಹಳಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕನ ಎದೆಗೆ ಬಡಿದು ಮೃತಪಟ್ಟಿದ್ದಾನೆ. 14 ವರ್ಷದ ಬಾದಲ್ ಸಂತೋಷ್‌ಭಾಯ್ ಠಾಕೂರ್ ಮೃತ ಬಾಲಕ. ಸ್ನೇಹಿತನ ಜೊತೆ ರೈಲ್ವೆ ಹಳಿ ಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಘಟನೆ ನಡೆದಿದೆ. ವೆರಾವಲ್-ಬಾಂದ್ರಾ ಟರ್ಮಿನಸ್ ರೈಲಿನ ಮೊದಲ ಬೋಗಿಯಲ್ಲಿದ್ದ ಪ್ರಯಾಣಿಕನೊಬ್ಬ ವೇಗವಾಗಿ ಬರುತ್ತಿದ್ದ ರೈಲಿನಿಂದ ರೈಲು ಹಳಿಗಳ ಕಡೆಗೆ ನೀರು ತುಂಬಿದ್ದ ಬಾಟಲನ್ನು ಎಸೆದಿದ್ದು, ಅದು ಬಾಲಕನ ಎದೆಗೆ ಬಡಿದಿದೆ.

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಬುಧವಾರ ಮಧ್ಯರಾತ್ರಿ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆ  ಚರ್ಚೆ ನಡೆಯಿತು. ನಂತರ 2 ಗಂಟೆ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆಗೆ ಮಸೂದೆಗೆ ಸದನ  ಸಮ್ಮತಿಸಿದೆ. ಮಸೂದೆ

ಲೋಕಸಭೆಯಲ್ಲಿ ವಿವಾದಾಸ್ಪದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಗದ್ದಲ, ಕೋಲಾಹಲದ ನಡುವೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಲೋಕಸಭಾ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು

ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ

ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಮೂಲಕ

ಅಮೆರಿಕಕ್ಕಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧಕ್ಕೆ ಸಿದ್ಧವೆಂದ ಟ್ರಂಪ್‌

ಅಮೆರಿಕದ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧ ಮಾಡಲು ಸಿದ್ಧ ಎಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಏ.2ಅಮೆರಿಕದ ವಿಮೋಚನಾ ದಿನ ಎಂದು ಘೋಷಿಸಿರುವ ಟ್ರಂಪ್‌, ಅಮೆರಿಕ ದೊಂದಿಗೆ ವ್ಯವಹರಿಸುವ ಎಲ್ಲಾ ದೇಶಗಳ ಮೇಲೆ ಸುಂಕ ಹೆಚ್ಚಳ ಮಾಡುವುದಾಗಿ

ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ

ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ

ನಾಳೆ‌‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ:‌ ಟ್ರಾಫಿಕ್ ಪೊಲೀಸ್‌ ಅಲರ್ಟ್‌

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು

ನಾಳೆ ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ

ಮ್ಯಾನ್ಮರ್ ನಲ್ಲಿ 2 ಸಾವಿರ ದಾಟಿದ ಭೂಕಂಪನ ಸಾವಿನ ಸಂಖ್ಯೆ, ಒಂದು ವಾರ ಮೌನಾಚರಣೆ

ಮ್ಯಾನ್ಮರ್ ನಲ್ಲಿ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 2000 ದಾಟಿದ್ದು, ಒಂದು ವಾರ ಮೌನಾಚರಣೆಗೆ ಸರ್ಕಾರ ಆದೇಶಿಸಿದೆ. ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆಯಾಗಿದ್ದು, ಇನ್ನೂ 219 ಮಂದಿ ನಾಪತ್ತೆಯಾಗಿ ದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಭವಿಸಿದ ಭೀಕರ

ಕುಂಭಮೇಳದ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕನ ಬಂಧನ

ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು  ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕ ದೆಹಲಿ ಪೊಲೀಸರು ಬಂಧಿಸಿ ದ್ದಾರೆ. ಮುಂಬೈನಲ್ಲಿ