ದೇಶ-ವಿದೇಶ
ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ಗಣ್ಯರ ಸಮ್ಮುಖ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು. ರಾಜೀನಾಮೆ ನೀಡಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷ. ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ
ಅಮೆರಿಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕದ ವ್ಯಕ್ತಿಯ ಹತ್ಯೆ
ಅಮೆರಿಕದ ಡಲ್ಲಾಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆಗೈದು ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರ್ನಾಟಕದ ಚಂದ್ರ ನಾಗಮಲ್ಲಯ್ಯ (೩೭) ಎಂದು ಗುರುತಿಸಲಾಗಿದೆ. ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಕೊಲೆಗಾರ. ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ
ಭಾರತ-ಪಾಕ್ ಟಿ20 ಏಷ್ಯಾಕಪ್ ಪಂದ್ಯ ರದ್ದು: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ
ಸೆಪ್ಟಂಬರ್ 14ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. 2025ರ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್ ನಡುವಿನ ಪಂದ್ಯಕ್ಕೆ ವಿರೋಧ ಕೇಳಿಬರುತ್ತಿದೆ. ಆಪರೇಷನ್
ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾ ಸೇನೆಗೆ ಭಾರತೀಯರ ನೇಮಕ: ಎಚ್ಚರಿಕೆ ನೀಡಿದ ವಿದೇಶ ಸಚಿವಾಲಯ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ಈ ಯೋಚನೆ ಬಿಟ್ಟು ಬಿಡಿ, ಇದು ತುಂಬಾ ಅಪಾಯಕಾರಿ ನಿರ್ಧಾರವಾಗುತ್ತದೆ ಎಂದು ವಿದೇಶ ಸಚಿವಾಲಯ ಎಚ್ಚರಿಕೆ ನೀಡಿದೆ. ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ವಿಷಯ ಚರ್ಚಿಸಿ.
ವೇದಿಕೆಯಲ್ಲಿದ್ದ ಟ್ರಂಪ್ ಅತ್ಯಾಪ್ತನಿಗೆ ಗುಂಡಿಟ್ಟು ಹತ್ಯೆ
ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಅಧ್ಯಕ್ಷ ಟ್ರಂಪ್ ಅವರ ಅತ್ಯಾಪ್ತ ಚಾರ್ಲಿ ಕಿರ್ಕ್‌ನನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ. ಗುಂಡಿನ ದಾಳಿಯ ನಂತರ ವಿವಿ ಕ್ಯಾಂಪಸ್ ಅನ್ನು ಸೀಲ್ ಮಾಡಿದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಟರ್ನಿಂಗ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು
ಕತಾರ್‌ನಲ್ಲಿ ಇಸ್ರೇಲ್ ಪಡೆ ವೈಮಾನಕ ದಾಳಿ: ಹಮಾಸ್ ನಾಯಕನ ಮಗ ಸೇರಿ ಆರು ಮಂದಿ ಸಾವು
ಕತಾರ್ ರಾಜಧಾನಿ ದೋಹಾದಲ್ಲಿ ಇಸ್ರೇಲ್ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ
ಸಿಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿ
ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ 15ನೇ ಉಪರಾಷ್ಟ್ರಪತಿ. ರಾಧಾಕೃಷ್ಣನ್ ಅವರು ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು
ಸೋಷಿಯಲ್ ಮೀಡಿಯಾ ಬ್ಯಾನ್ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ
ನೇಪಾಳದಲ್ಲಿ ಸೋಷಿಯಲ್ ಮೀಡಿಯಾಗಳ ಬ್ಯಾನ್ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ




