ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ಶುಕ್ರವಾದ ದಾಖಲಿಸಲಾಗಿದೆ.
ಡಿಸೆಂಬರ್ 8ಕ್ಕೆ 90ನೇ ವಸಂತಕ್ಕೆ ಕಾಲಿಡಲಿರುವ ಧರ್ಮೆಂದ್ರ ಅವರನ್ನು ಸಹಜ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, 4-5 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಏಪ್ರಿಲ್ ನಲ್ಲಿ ಕಣ್ಣಿನ ಶಸ್ತ್ರಚಿಕತ್ಸೆಗೆ ಒಳಗಾಗಿದ್ದ ಧರ್ಮೇಂದ್ರ ಆಸ್ಪತ್ರೆಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿ, ನಾನಿನ್ನು ಗಟ್ಟಿಮುಟ್ಟಾಗಿ ಇದ್ದೇನೆ ಎಂದು ಹೇಳಿದ್ದಾರೆ.
ತೆರೆ ಬಾತೋ ಮೆ ಐಸಾ ಜಾದೂ ಹೆ ಚಿತ್ರದಲ್ಲಿ ಧರ್ಮೆಂದ್ರ ಕೊನೆಯ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡಿದ್ದು, ಅಭಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಜೊತೆ ಇಕ್ಕಿಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.


