ಅಂಡಮಾನ್, ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದ ಎಸ್.ಅನ್ನಪೂರ್ಣ ಮೃತಪಟ್ಟವರು. ಮೂರು ದಿನಗಳ ಹಿಂದೆ ಅನ್ನಪೂರ್ಣ ಅವರು ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ ರಾತ್ರಿ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಅವರು ಅಸು ನೀಗಿದ್ದಾರೆ.
ಮೃತದೇಹವನ್ನು ಧಾರವಾಡಕ್ಕೆ ತರಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದು, ಸೋಮವಾರ ನಗರಕ್ಕೆ ತಲುಪುವ ಸಾಧ್ಯತೆ ಇದೆ. ಕೆಸಿಡಿ ಕಾಲೇಜಿನ ಕಾವೇರಿ ಹಾಸ್ಟೆಲ್ ವಾರ್ಡನ್ ಆಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು.


