ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟಿಸಿದರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಅವರು ಉಪಸ್ಥಿತರಿದ್ದರು.
ಬಸ್ ನಿಲ್ದಾಣದಲ್ಲಿನ ಮೂಲಭೂತ ಸೌಲಭ್ಯಗಳು: ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಗೃಹ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾದ ಶೌಚಾಲಯ, ಬಸ್‍ಗಳ ನಿಲುಗಡೆಗೆ 4 ಅಂಕಣಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ (ಆರ್.ಓ ಪ್ಲಾಂಟ್), ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಉಪಹಾರ ಗೃಹ ಮತ್ತು ವಾಣಿಜ್ಯ ಮಳಿಗೆಗಳು, ಸಂಚಾರ ನಿಯಂತ್ರಣಾ ಕೊಠಡಿ, ಮೊದಲನೇ ಮಹಡಿಯಲ್ಲಿ ಕಛೇರಿ ಉಪಯೋಗಕ್ಕಾಗಿ ಕೊಠಡಿ, ವಿಶೇಷ ಚೇತನರಿಗೆ ರ್ಯಾಂಪ್ ವ್ಯವಸ್ಥೆ, ಲಿಫ್ಟ್ ವ್ಯವಸ್ಥೆಯನ್ನು ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


