Monday, September 22, 2025
Menu

ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್‌ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂದು ಆರೋಪಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ .ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

2019 ರಿಂದ 2024 ರವರೆಗೆ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ ಅಂದರೆ 100 ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ , ತಮ್ಮ ಎಕ್ಸ್ ಖಾತೆಯಲ್ಲಿ ‘ಲೂಟಿ’ ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ಮುಗಿಸಿ ಮುಚ್ಚಿದ ಕವರ್ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ಹೇಳಿದರು.

Related Posts

Leave a Reply

Your email address will not be published. Required fields are marked *