ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ
ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ.
ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. 500 ಕೋಟಿಯಷ್ಟು ಬಾರಿ ಮಹಿಳೆಯರು ಉಚಿತ ಸಂಚಾರ ಮಾಡಿದ್ದಾರೆ.
ಶಕ್ತಿ ಯೋಜನೆ ವಿರುದ್ದ ಸಾರಿಗೆ ನೌಕರರು ಮನಬಂದಂತೆ ಮಾತನಾಡುವಂತಿಲ್ಲ. ಬಸ್ನಲ್ಲಿ ಪ್ರಯಾಣಿಕರ ಜೊತೆಗೆ ಬೇಕಾಬಿಟ್ಟಿಯಾಗಿ ಮಾತನಾಡಿದರೆ ತಕ್ಕ ಪರಿಣಾಮ ಎದುರಿಸ ಬೇಕಾಗು ತ್ತದೆ. ಶಕ್ತಿ ಯೋಜನೆ ಬಗ್ಗೆ ಕೀಳಾಗಿ ಮಾತನಾಡಿದರೆ ನೌಕರರು ಅಮಾನತಾಗಲಿದ್ದಾರೆ ಎಂದು ಸಾರಿಗೆ ನಿಗಮಗಳ ಸುತ್ತೋಲೆ ತಿಳಿಸಿದೆ.
ಯಾವುದೇ ಹಿಂಜರಿಕೆ, ಭಯ ಇಲ್ಲದೆ ಶಕ್ತಿ ಸ್ಕೀಂ ಬಗ್ಗೆ ಸಾರಿಗೆ ನೌಕರರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ದೂರುಗಳ ಆಧಾರದಲ್ಲಿ ಎಲ್ಲಾ ಡಿಸಿಗಳಿಗೆ ಸಾರಿಗೆ ನಿಗಮಗಳು ಖಡಕ್ ಸೂಚನೆ ನೀಡಿವೆ.
ಮಹಿಳೆಯರಿಗೆ ಈ ಯೋಜನೆಯಿಂದ ಉಪಯೋಗ ಆಗುತ್ತಿದೆ ನಿಜ. ಆದರೆ ಸಾರಿಗೆ ನೌಕರರಿಗೆ ಪ್ರಯೋಜನ ಆಗುತ್ತಿಲ್ಲ. ಕೂಡಲೇ ಈ ಆದೇಶ ವಾಪಸ್ ಪಡೆಯಬೇಕೆಂದು ನೌಕರರು ಆಗ್ರಹಿಸಿ ದ್ದಾರೆ.


