ದೆಹಲಿಯ ಕಸ್ತೂರನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಪರವಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚುನಾವಣೆ ಪ್ರಚಾರ ನಡೆಸಿದರು.
ಚುನಾವಣೆ ಪ್ರಚಾರದ ಅಂಗವಾಗಿ ಕ್ಷೇತ್ರದ ತ್ಯಾಗರಾಜ್ ಕಾಲೋನಿಯಲ್ಲಿ ಕ್ರಿಕೆಟ್ ಆಡಿದ ಡಿಕೆಶಿ ಭರ್ಜರಿಯಾಗಿಯೇ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ಫೆ.೮ಕ್ಕೆ ನಡೆಯಲಿದ್ದು, 11ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ತೀವ್ರಗೊಂಡಿದೆ.