Menu

ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನಕ್ಕೆ  ಡಿಕೆ ಶಿವಕುಮಾರ್ ಸಂತಾಪ

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಪೂಜ್ಯ ಸ್ವಾಮೀಜಿಗಳ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಸಮುದಾಯದ ಬೆಳವಣಿಗೆಗೆ ಸ್ವಾಮೀಜಿಯವರು ನೀಡಿದ ಕೊಡುಗೆ ಅಪಾರ. ಶಿಕ್ಷಣದಿಂದ ಮಾತ್ರ ಸಮುದಾಯದ ಪ್ರಗತಿ ಸಾಧ್ಯ ಎಂದು ನಂಬಿದ್ದರು. ತಾವೇ ಕೃಷಿ ಮಾಡಿ ದಾಸೋಹ ಮಾಡುತ್ತಿದ್ದರು. ಅವರ ಅಗಲಿಕೆ ಇಡೀ ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ ಎಂದುಹೇಳಿದ್ದಾರೆ.

ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್  ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ‌. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *