ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ ಸಬಲೀಕರಣ ಸಚಿವರಾದ ನರೇಂದ್ರ ಹಾಗೂ ಹಣಕಾಸು ಸಚಿವರಾದ ಸುರೇಶ್ ಖನ್ನಾ ಅವರು ಬೆಂಗಳೂರಿಗೆ ಬಂದು, ಡಿಕೆ ಶಿವಕುಮಾರ್ ಅವರನ್ನು ಗೃಹಕಚೇರಿಯಲ್ಲಿ ಭೇಟಿಯಾಗಿ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಿಶೇಷವಾಗಿ ಆಹ್ವಾನಿಸಿದ್ದರು.
ಈ ಹಿನ್ನೆಲೆ ಡಿಕೆಶಿ ಅವರು ಕುಟುಂಬದೊಂದಿಗೆ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಎರಡು ದಿನ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.