ಬಸನಗೌಡ ಪಾಟೀಲ್ ವಿರುದ್ಧದ ಹೋರಾಟವನ್ನು ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್

ಬೆಂಗಳೂರು,ಆ.25 ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಡೆಸಿರುವ ಪ್ರತಿಭಟನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದು, ಪಕ್ಷದ ನಾಯಕರ ವಿರುದ್ಧ ಯಾರೇ ಹೇಳಿಕೆ ಕೊಟ್ಟರೂ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನ ಕಚೇರಿ ಬಾಗಿಲಿಗೆ ಬಿನ್ ಲಾಡಿನ್ ಭಾವಚಿತ್ರವನ್ನು ಹೋಲಿಕೆ ಮಾಡಿ ಅವಹೇಳನ ಮಾಡಿದ್ದಕ್ಕೆ ಸುದ್ದಿಗಾರರಿಗೆ ಡಿ.ಕೆ.ಶಿವಕುಮಾರ್ ನಗರದಲ್ಲಿಂದು ಪ್ರತಿಕ್ರಿಯಿಸಿದರು.

ಯತ್ನಾಳ್ ವಿರುದ್ಧ ಪೋಸ್ಟರ್ ಅಂಟಿಸಿ ನಮ್ಮ ಕಾರ್ಯಕರ್ತರು ಒಳ್ಳೆ ಕೆಲಸ ಮಾಡಿದ್ದಾರೆ. ನಮ್ಮ ನಾಯಕರ ವಿರುದ್ಧ ಯಾರೇ ಹೇಳಿಕೆ ಕೊಟ್ಟರೂ ನಮ್ಮ ಕಾರ್ಯಕರ್ತರು ಹೋರಾಟ ಮಾಡುತ್ತಾರೆ.ಯಾರೂ ಎಷ್ಟು ಬೇಕಾದರು ಕೇಸ್ ಹಾಕಲಿ, ಅದಕ್ಕೆಲ್ಲ ಹೆದರದೇ ಪ್ರತಿಭಟಿಸುತ್ತೇವೆ ಎಂದರು.

,

Leave a Reply

Your email address will not be published. Required fields are marked *