ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ೧೩ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೇರಳಂ ಸಿಎಂ ಸತೀಶನ್, ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಮತ್ತಿತರರು, ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಸಿನಿಮಾ ತಾರೆಯರು, ಕುಟುಂಬಸ್ಥರು, ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರು ಪೂಜೆ ನೆರವೇರಿಸಿದರು.


