Friday, September 05, 2025
Menu

ಡಿಕೆ ಶಿವಕುಮಾರ್‌ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್‌.ಅಶೋಕ

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ. ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ. ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆ ಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ್ಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಶೋಕ್‌ ಪೋಸ್ಟ್‌ ಮಾಡಿದ್ದಾರೆ.

ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್ ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ್ಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ್ಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು, ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮ್ಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ನಮ್ಮ ನಾಡಿನ ದುರಂತ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *