Menu

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ ಜೂನ್‌ ಮೂರಕ್ಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಜೂನ್ ಮೂರರಂದು (ಬುಧವಾರ) ನಡೆಯಲಿದೆ ಎಂದು ಹೇಳಲಾಗುತ್ತಿದೆ. ತುಮಕೂರು ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮೇ 31 ಅಥವಾ ಜೂನ್ 1ರಂದು ಪ್ರಮಾಣ ವಚನ ನಡೆಯಲಿದೆ ಎಂಬ ಮತುಗಳಿದ್ದವು. ಅಜ್ಜಯ್ಯನ ಪೀಠದ ಶ್ರೀಗಳು, ಜೂನ್ 3ರ ಬುಧವಾರದಂದು ಅತ್ಯಂತ ಶ್ರೇಷ್ಠ ಹಾಗೂ ವಿಜಯದಾಯಕ ಮುಹೂರ್ತವಿದೆ ಎಂದು ತಿಳಿಸಿದ್ದಾರೆ. ಇದೇ ದಿನಾಂಕ ಅಂತಿಮಗೊಳಿಸುವಂತೆ ಹೈಕಮಾಂಡ್ ಹಾಗೂ ರಾಜ್ಯಪಾಲರಿಗೆ ಮನವಿ ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ರಾಜಭವನದಲ್ಲಿ ದಿನಾಂಕದ ಅಧಿಕೃತ ಪ್ರಕಟಣೆಯ ಪ್ರಕ್ರಿಯೆಗಳು ಚುರುಕುಗೊಂಡಿದೆ, ಡಿಕೆ ಶಿವಕುಮಾರ್‌ ಮತ್ತು ಸೋದರ ಡಿಕೆ ಸುರೇಶ್‌ ಇಂದು ರಾಜಭವನಕ್ಕೆ ತೆರಳಿದ್ದರು. ಈ ನಡುವೆ ಚನ್ನಪಟ್ಟಣದ ಆಖೀಲ್ ಶಾ ಖಾದ್ರಿ ದರ್ಗಾದಲ್ಲಿ ಚನ್ನಪಟ್ಟಣ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕದಲ್ಲಿ ನಡೆಯಲಿರುವ ಸಚಿವ ಸಂಪುಟ ರಚನೆ ಹಾಗೂ ನಾಯಕತ್ವ ಬದಲಾವಣೆ ಹಿನ್ನೆಲೆ ಈ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಡಿಕೆ ಶಿವಕುಮಾರ್‌ಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಲಿ, ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಮುಖಂಡರು ಮತ್ತು ಸದಸ್ಯರು ಸಾಮೂಹಿಕವಾಗಿ ಬೇಡಿಕೊಂಡರು.

Related Posts

Leave a Reply

Your email address will not be published. Required fields are marked *