ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು.
ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಶಿವಕುಮಾರ್ ಅವರಿಗೆ ತಂಡದ ಆಟಗಾರರನ್ನು ಪರಿಚಯಿಸಿದರು.
ನಟ ಹಾಗೂ ತಂಡದ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ ಅಶೋಕ್ ಖೇಣಿ, ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA)ಅಧ್ಯಕ್ಷ ರಘುನಂದನ್ ರಾಮಣ್ಣ ಉಪಸ್ಥಿತರಿದ್ದರು.
ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನಲ್ಲಿ ಏಳು ತಂಡಗಳು ಆಟವಾಡುತ್ತಿವೆ, ಮಾರ್ಚ್ 2ರಂದು ಫೈನಲ್ ಪಂದ್ಯ ನಡೆಯಲಿದೆ. ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡದ ಪಂದ್ಯಗಳು ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ ಯನ್ನು ಹುಟ್ಟುಹಾಕಿವೆ.
ಕರ್ನಾಟಕ ಬುಲ್ಡೋಜರ್ಸ್ ತಂಡ ಗೆಲುವು: ಕರ್ನಾಟಕ ಬುಲ್ಡೋಜರ್ಸ್ ತಂಡ ತೆಲುಗು ವಾರಿಯರ್ಸ್ ವಿರುದ್ಧ ಸುಲಭವಾಗಿ 46 ರನ್ಗಳ ಜಯ ಸಾಧಿಸಿದೆ. ಡಾರ್ಲಿಂಗ್ ಕೃಷ್ಣ ಅವರ 80 ರನ್‌ಗಳು, ಚಂದನ್ ಹಾಗೂ ಅನೂಪ್ ಸಿಳೀನ್ ಅವರ ಬೌಲಿಂಗ್ ಕರ್ನಾಟಕ ತಂಡಕ್ಕೆ ಗೆಲುವು ತಂದು ಕೊಡುವಲ್ಲಿ ಪ್ರಮುಖ ಅಂಶವಾಗಿತ್ತು. ಕೃಷ್ಣನಿಗೆ ಸಾಥ್ ನೀಡಿದ ಕರಣ್ ಕೂಡ ಅಜೇಯ 11 ರನ್ಗಳ ಇನ್ನಿಂಗ್ಸ್ ಆಡಿದರು.