ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ ಪೋಷಕರು ಆರೋಪಿಸಿದ್ದಾರೆ.
ನೀಡುತ್ತಿದ್ದ. ಇದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೊಂದು ಕೊಲೆ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ರೇಖಾ ಕಾಲೇಜಿಗೆ ಹೋಗ್ತಿದ್ದಾಗ ಅದೇ ಕಾಲೇಜಿನಲ್ಲಿ ಮಾಯಪ್ಪ ಕ್ಲರ್ಕ್ ಆಗಿದ್ದ. ಇಬ್ಬರ ಮಧ್ಯೆ ಪ್ರೀತಿಯಾಗಿ ಆರು ವರ್ಷದ ಹಿಂದೆ ಮದುವೆಯಾಗಿದ್ದರು.
ಮಾಯಪ್ಪ ಬೆಂಗಳೂರಿಗೆ ಬಂದು ಬಿಬಿಎಂಪಿ ಮಾರ್ಷಲ್ ಆಗಿ ಕೆಲಸ ಮಾಡಿಕೊಂಡಿದ್ದ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಬಾಡಿಗೆ ಮನೆ ಪಡೆದು ಹೆಂಡತಿ, ಮಕ್ಕಳೊಂದಿಗೆ ವಾಸವಿದ್ದ.
ಕುಡಿತದ ಚಟ ತೀವ್ರಗೊಂಡು ಆತ ಪತ್ನಿಗೆ ಹಿಂಸೆ ಕೊಡಲು ಪ್ರಾರಂಭಿಸಿದ್ದ. ವರದಕ್ಷಿಣೆ ಹಣ ತರುವಂತೆ ಪೀಡಿಸುತ್ತಿದ್ದ. ಇದರಿಂದ ನೊಂದ ಆಕೆ ಬದುಕನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದಳು ಎನ್ನಲಾಗಿದೆ.


