ನಟ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು ನಿಧನರಾದರು. ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗೃಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ನಾಗಮ್ಮ ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಪುನೀತ್ ರಾಜ್ ಕುಮಾರ್ ಅವರನ್ರುನು ಬಹಳವಾಗಿ ಇಷ್ಟಪಡುತ್ತಿದ್ದ ನಾಗಮ್ಮ ಅವರಿಗೆ ಪುನೀತ್ ಮೃತಪಟ್ಟಿರುವ ವಿಚಾರವನ್ನು ತಿಳಿಸಿರಲಿಲ್ಲ ಎಂದು ಹೇಳಲಾಗುತ್ತಿದೆ.