Menu

ಆಪರೇಷನ್ ಸಿಂಧೂರ್‌ ಸರ್ವಪಕ್ಷ ನಿಯೋಗಕ್ಕೆ ಮಾಸ್ಕೊದಲ್ಲಿ ಡ್ರೋನ್‌ ದಾಳಿ?

ಆಪರೇಷನ್ ಸಿಂಧೂರ್‌ನಡಿ ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ರಷ್ಯಾದ ಮಾಸ್ಕೊ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ನಡೆದಿದ್ದು, ಸಂಸದರ ನಿಯೋಗವು ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ.

ಡ್ರೋನ್ ದಾಳಿಯಿಂದಾಗಿ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಹಲವು ಗಂಟೆ ಸುತ್ತುತ್ತಲೇ ಇತ್ತು, ಭದ್ರತಾ ಪರಿಸ್ಥಿತಿಗಳ ಮೌಲ್ಯಮಾಪನದ ನಂತರ ವಿಮಾನವು ಅಂತಿಮವಾಗಿ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಉಕ್ರೇನ್‌ನ ಡ್ರೋನ್‌ ಈ ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ.

ಆಪರೇಷನ್ ಸಿಂಧೂರ್ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಭಾರತದಿಂದ ಆರು ನಿಯೋಗಗಳು ನಾನಾ ದೇಶಗಳಿಗೆ ಹೋಗಿವೆ. ಭಾರತದಿಂದ ರಷ್ಯಾಕ್ಕೆ ತೆರಳಿರುವ ನಿಯೋಗದಲ್ಲಿ ಡಿಎಂಕೆ ಸಂಸದೆ ಕನ್ನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ಆರ್‌ಜೆಡಿಯ ಪ್ರೇಮಚಂದ್ ಗುಪ್ತಾ, ಕ್ಯಾಪ್ಟನ್ ಬ್ರಿಜೇಶ್, ಅಶೋಕ್ ಕುಮಾರ್ ಮಿತ್ತಲ್ ಮತ್ತು ರಾಯಭಾರಿ ಮಂಜೀವ್ ಸಿಂಗ್ ಪುರಿ ಸೇರಿದ್ದಾರೆ.

ಈ ದಾಳಿಯ ನಂತರ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಉಂಟಾಗಿ ಹಲವು ವಿಮಾನಗಳಿಗೆ ತಾತ್ಕಾಲಿಕವಾಗಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನೀಡಲಿಲ್ಲ. ದೇಶೀಯ ಮತ್ತು ಅಂತಾ ರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಹಲವು ಗಂಟೆ ಸ್ಥಗಿತಗೊಳಿಸಲಾಗಿತ್ತು. ಸಂಸದರ ನಿಯೋಗವಿದ್ದ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದ ಬಳಿಕ ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಸ್ವಾಗತಿಸಿ ಸುರಕ್ಷಿತವಾಗಿ ಹೋಟೆಲ್‌ಗೆ ಕರೆದೊಯ್ದರು. ರಷ್ಯಾ ಭೇಟಿಯನ್ನು ಪೂರ್ಣಗೊಳಿಸಿದ ನಂತರ ನಿಯೋಗವು ಸ್ಲೊವೇನಿಯಾ, ಗ್ರೀಸ್, ಲಾಟ್ವಿಯಾ ಮತ್ತು ಸ್ಪೇನ್‌ಗೆ ಪ್ರಯಾಣಿಸಲಿದೆ.

Related Posts

Leave a Reply

Your email address will not be published. Required fields are marked *