ಬೆಂಗಳೂರು ದೇವನಹಳ್ಳಿಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳುಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕ್ಯಾಂಡಿ ಪ್ಯಾಕೆಟ್ಗಳಲಿ ಅಡಗಿಸಿಟ್ಟಿದ್ದ ಒಟ್ಟು 3.43 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದಾಗ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 3.39 ಕೋಟಿ ರೂಪಾಯಿ. ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್ಸ್ಟ್ಯಾನ್ಸಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮತ್ತೊಬ್ಬ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕ ಅಕ್ರಮವಾಗಿ ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್ಗಳಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದರು. ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ, 1.7 ಕೆಜಿ ಹ್ಯಾಶೀಶ್/ಚರಸ್ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 4.25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿರೆದಿದ್ದು, ಇನ್ನಷ್ಟು ಮಂದಿಯ ಬಂಧನಗಳು ಸಾಧ್ಯತೆ ಇದೆ ಎನ್ನಲಾಗಿದೆ.


