Menu

ಬೆಂಗಳೂರು ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ.ಗಳ ಡ್ರಗ್ಸ್‌ ವಶ, ಇಬ್ಬರ ಬಂಧನ

ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.  ಎಲ್‌ಎಸ್‌ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕರ್ನಾಟಕದಲ್ಲಿ ಮೊದಲ ಬಾರಿಗೆ LSD ಸ್ಟ್ರಿಪ್ಸ್​​ಗಳನ್ನು ಸಿಸಿಬಿ ಜಪ್ತಿ ಮಾಡಿದೆ.

ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳು. ಆರೋಪಿಗಳಿಂದ ಎಲ್‌ಎಸ್‌ಡಿ, ಹೈಡ್ರೋ ಗಾಂಜಾ ಮತ್ತು ಚರಸ್​​ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ದೇವರ ಚಿತ್ರ ಸೇರಿ ಚಿತ್ರಕಲಾ ರೂಪದಲ್ಲಿ LSD ಸ್ಟ್ರಿಪ್ಟ್ ಮಾರಾಟ ಮಾಡುತ್ತಿದ್ದರು ಎಂಬುದು ಕಾರ್ಯಾಚರಣೆಯ ವೇಳೆ ಬಯಲಾಗಿದೆ. ಬಂಧಿತ ಆರೋಪಿಗಳು ಡ್ರಗ್ಸ್ ಪೆಡ್ಲಿಂಗ್ ವೃತ್ತಿ ಮಾಡಿಕೊಂಡಿದ್ದರು. ವಿನ್ಸೆಂಟ್​ ಎಂಬಾತ ಥಾಯ್​ಲ್ಯಾಂಡ್​​ನಿಂದ ಇವರಿಗೆ ಡ್ರಗ್ಸ್​ ಪೂರೈಸುತ್ತಿದ್ದ. ವಿಮಾನ ಮೂಲಕ ಡ್ರಗ್ಸ್ ಪೂರೈಕೆ ಆಗುತ್ತಿತ್ತು. ವಿನ್ಸೆಂಟ್ ಸೂಚಿಸಿದ ಜಾಗದಲ್ಲಿ ಅಶ್ವಿನ್ ಮತ್ತು ಮೊಬಿನಾ ಡ್ರಗ್ಸ್ ಇಡುತ್ತಿದ್ದರು.

ಪ್ರಕರಣದಲ್ಲಿ ಫ್ಲ್ಯಾಟ್​​​​ ಮಾಲೀಕನ ಪಾತ್ರದ ಬಗ್ಗೆ ಸಿಸಿಬಿಯಿಂದ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಒಡಿಶಾದ ಪೆಡ್ಲರ್‌ನನ್ನು ಬೆಂಗಳೂರಿನ ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜ್ ದಾಸ್​​ ಬಂಧಿತ ಆರೋಪಿಯಾಗಿದ್ದು, 55 ಲಕ್ಷ ಮೌಲ್ಯದ 27 ಕೆಜಿ ಗಾಂಜಾ, 3 ಕೆಜಿ 200 ಗ್ರಾಂ ಆ್ಯಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ.

Related Posts

Leave a Reply

Your email address will not be published. Required fields are marked *