Monday, September 28, 2026
Menu

ಹುಣಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ ವಶ, ಆರೋಪಿಗಳಿಬ್ಬರ ಬಂಧನ

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹ ನಡೆಸಲಾಗುತ್ತಿತ್ತು. ದಾಸನಪುರ ಗ್ರಾಮದಲ್ಲಿ ಇರುವ ಪಕ್ಕದ ಆಸ್ಪತ್ರೆ ಕಾವಲ್‌ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಹುಣಸೂರು ಟೌನ್ ರೆಹಮತ್ ಮೊಹಲ್ಲಾ ನಿವಾಸಿಯ ಶೆಡ್‌ನಲ್ಲಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.

ಪೊಲೀಸರು 7.35 ಕೆ.ಜಿ ತೂಕದ ಮೆಫೆಡ್ರೋನ್ ಮತ್ತು 41 ಕೆ.ಜಿ ತೂಕದ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 48 ಕೆ.ಜಿ ತೂಕದ ಡ್ರಗ್ಸ್ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಸಿಂಥೆಟಿಕ್ ಡ್ರಗ್ಸ್ ತಯಾರಿಸಿ ವಿತರಣೆ ಮಾಡುತ್ತಿದ್ದರು ಎನ್ನಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿಸಿರುವ ಪೊಲೀಸರು ಈ ಜಾಲದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *