Menu

ಮಹದೇವಪುರ ಲೋಕಸಭಾ ಚುನಾವಣೆಯಲ್ಲಿ 1 ಲಕ್ಷಕ್ಕೂ ಅಧಿಕ ನಕಲಿ ಮತದಾನ: ರಾಹುಲ್ ಗಾಂಧಿ ಬಾಂಬ್

rahul gandhi press meet

ನವದೆಹಲಿ: ಕರ್ನಾಟಕದ ಮತದಾರರ ಪಟ್ಟಿಗಳಲ್ಲಿ ಭಾರೀ ಪ್ರಮಾಣದಲ್ಲಿ ವಂಚನೆ ನಡೆದಿದ್ದು, 40,009 ನಕಲಿ ಮತದಾರರ ವಿಳಾಸಗಳಿವೆ. ಕಾಂಗ್ರೆಸ್ ನಡೆಸಿದ `ವೋಟ್ ಚೋರಿ’ ತನಿಖೆಯಲ್ಲಿ ‘ಮನೆ ಸಂಖ್ಯೆ 0’ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ ಮತಗಳ್ಳತನ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ. ಮತದಾರರ ಪಟ್ಟಿಗಳಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ ಆ ಸ್ಥಳಕ್ಕೆ ಯಾರೂ ವಾಸಿಸುತ್ತಿಲ್ಲ ಎಂಬುದು ತಿಳಿಯಿತು. ನಕಲಿ ವಿಳಾಸಗಳೊಂದಿಗೆ 40,000 ನಮೂದುಗಳು ಮತ್ತು ಯಾವುದೇ ಫೋಟೋಗಳಿಲ್ಲದ ಸುಮಾರು 4,000 ನೋಂದಾಯಿತ ಮತದಾರರಿದ್ದಾರೆ ಎಂದು ಅವರು ಆರೋಪಿಸಿದರು.

ಮಹದೇವಪುರ ಕ್ಷೇತ್ರದಲ್ಲಿ ಅಕ್ರಮ ಮತದಾನ:

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾನ ನಡೆದಿದೆ. ಲೋಕಸಭಾ ಚುನಾವಣೆ 1 ಲಕ್ಷಕ್ಕೂ ಅಧಿಕ ನಕಲಿ ಮತಗಳ್ಳತನವಾಗಿರುವುದು ಕಂಡು ಬಂದಿದೆ. ಕೆಲವರು ಹಲವು ಬಾರಿ ಮತದಾನ ಮಾಡಿರುವ ಬಗ್ಗೆ ದಾಖಲೆ ನಮ್ಮ ಬಳಿ ಇದೆ ಎಂದಿರುವ ರಾಹುಲ್ ಗಾಂಧಿ, ಬೆಂಗಳೂರಿನ 40,009 ನಕಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮತಪಟ್ಟಿಯಲ್ಲಿ ನಕಲಿ ವಿಳಾಸ, ಮತದಾರನ ತಂದೆಯ ಹೆಸರೇ ಇಲ್ಲ. 33 ಸಾವಿರ ಮತದಾರರಿಗೆ ಸಂಬಂಧಿಸಿದಂತೆ ಸೂಕ್ತ ಮಾಹಿತಿ ಇಲ್ಲ ಎನ್ನುವ ಮೂಲಕ ರಾಹುಲ್ ಗಾಂಧಿ ದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದಿದ್ದಾರೆ.

Related Posts

Leave a Reply

Your email address will not be published. Required fields are marked *